Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಂಕಾಪುರದಲ್ಲಿ ಬೀದಿ ನಾಯಿಗಳ ಅಟ್ಟಹಾಸ: ಆಟವಾಡುತ್ತಿದ್ದ ಇಬ್ಬರು ಬಾಲಕರ ಮೇಲೆ ಭೀಕರ ದಾಳಿ; ಪುರಸಭೆ ವಿರುದ್ಧ ಜನಾಕ್ರೋಶ!

Spread the love

ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಪುಟ್ಟ ಬಾಲಕರ ಮೇಲೆ ನಾಯಿಗಳು ಭೀಕರವಾಗಿ ದಾಳಿ ನಡೆಸಿರುವ ಘಟನೆ ಸಂಭವಿಸಿದೆ. ಈ ದಾಳಿಯಲ್ಲಿ 5 ವರ್ಷದ ಹಸನ್ ಮತ್ತು 3 ವರ್ಷದ ಅಕ್ರಮ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮಕ್ಕಳ ಕೈ, ಕಾಲು ಹಾಗೂ ಎದೆಯ ಭಾಗಕ್ಕೆ ನಾಯಿಗಳು ಬಲವಾಗಿ ಕಚ್ಚಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ.

ತಕ್ಷಣವೇ ಗಾಯಾಳು ಮಕ್ಕಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹಸನ್‌ನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಯಿಂದ ಇಡೀ ಪಟ್ಟಣದ ಜನತೆ ಬೆಚ್ಚಿಬಿದ್ದಿದ್ದು, ಪೋಷಕರು ಮತ್ತು ಸ್ಥಳೀಯರಲ್ಲಿ ಆತಂಕದ ಛಾಯೆ ಆವರಿಸಿದೆ.

ಬಂಕಾಪುರ ಪುರಸಭೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅವಘಡಕ್ಕೆ ನೇರ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಬೀದಿ ನಾಯಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದರೂ ಪುರಸಭೆ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಾಯಿಗಳ ಕಾಟದಿಂದಾಗಿ ವೃದ್ಧರು ಮತ್ತು ಮಕ್ಕಳು ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. “ನಮ್ಮ ಮಕ್ಕಳ ಜೀವಕ್ಕೆ ಅಪಾಯವಾದರೆ ಯಾರು ಹೊಣೆ?” ಎಂದು ಪ್ರಶ್ನಿಸಿರುವ ಪೋಷಕರು, ತಕ್ಷಣವೇ ಬೀದಿ ನಾಯಿಗಳನ್ನು ಹಿಡಿದು ನಗರದಿಂದ ದೂರ ಬಿಡಬೇಕು ಅಥವಾ ಸಂತಾನಶಕ್ತಿ ಹರಣ ಚಿಕಿತ್ಸೆಯಂತಹ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದರೆ ಪುರಸಭೆ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *