ಗ್ರೇಟರ್ ನೋಯ್ಡಾ: ಲಿವಿಂಗ್ ಟುಗೆದರ್‌ನಲ್ಲಿದ್ದ ದಕ್ಷಿಣ ಕೊರಿಯಾ ಪ್ರಜೆಯ ಹತ್ಯೆ

ತನ್ನ ಜೊತೆ ಲೀವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ಸಾಯಿಸಿದ ಘಟನೆ ರಾಷ್ಟ್ರ ರಾಜಧಾನಿಗೆ ಸಮೀಪದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಮಣಿಪುರ ಮೂಲದ ಮಹಿಳೆಯೊಬ್ಬರು ವಿದೇಶಿ ಪ್ರಜೆ ದಕ್ಷಿಣ ಕೊರಿಯಾದ ವ್ಯಕ್ತಿಯ ಜೊತೆ ಲೀವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದು, ಗ್ರೇಟರ್ ನೋಯ್ಡಾದಲ್ಲಿ ವಾಸಮಾಡುತ್ತಿದ್ದರು.


ಡಕ್ ಹೀ ಯುಹ್ ಪ್ರೇಯಸಿಯಿಂದಲೇ ಕೊಲೆಯಾದ ದಕ್ಷಿಣ ಕೊರಿಯಾ ಪ್ರಜೆ. ನಾಲೆಡ್ಜ್ ಪಾರ್ಕ್ ಪೊಲೀಸರಿಗೆ ಜಿಐಎಂಎಸ್ ಆಸ್ಪತ್ರೆಯವರು ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಬಾಯ್‌ಫ್ರೆಂಡ್ ಮೇಲೆ ಹಲ್ಲೆ ಮಾಡಿದ ಮಣಿಪುರ ಯುವತಿ ಲುಂಜೀನಾ ಪಮೈ ಬಳಿಕ ಆತನ ಸ್ಥಿತಿ ಕೈಮೀರುತ್ತಿದ್ದಂತೆ ಆಸ್ಪತ್ರೆಗೆ ಕರೆದುಕೊಂಡು ಬಂದು ಸೇರಿಸಿದ್ದಳು. ಆದರೆ ಜಿಐಎಂಎಸ್ ಆಸ್ಪತ್ರೆಗೆ ಬರುವ ಮೊದಲೇ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ