Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಸಿರು ಇಂಧನದತ್ತ ಭಾರತದ ಹೆಜ್ಜೆ: ಹೈಡ್ರೋಜನ್ ಕಾರು ಚಾಲನೆ ಮಾಡಿದ ಸಚಿವ ಪ್ರಹ್ಲಾದ್ ಜೋಶಿ; ಗಡ್ಕರಿ ಸಾಥ್!

Spread the love

ನವದೆಹಲಿ: ಹಸಿರು ಹೈಡ್ರೋಜನ್ ಮತ್ತು ಶುದ್ಧ ಇಂಧನ ಉತ್ತೇಜಿಸುವ ಸರ್ಕಾರದ ಬದ್ಧತೆಗೆ ಪ್ರತೀಕ ಎಂಬಂತೆ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಂದು (ಜ.6) ಟೊಯೋಟಾ ಮಿರೈ (Toyota Mirai) ಇಂಧನ ಕೋಶ ವಿದ್ಯುತ್ ವಾಹನದಲ್ಲಿ (FCEV) ಪ್ರಯಾಣಿಸಿ ಗಮನ ಸೆಳೆದರು.

ಸಚಿವ ಪ್ರಹ್ಲಾದ್ ಜೋಶಿ ಅವರು ದೆಹಲಿಯ ಭಾರತ್ ಮಂಟಪದಿಂದ ನಿತಿನ್ ಗಡ್ಕರಿ ಅವರ ನಿವಾಸದವರೆಗೆ ಮಿರೈ ಹಸಿರು ಇಂಧನ ಚಾಲಿತ ಕಾರನ್ನು ಸ್ವತಃ ಚಾಲನೆ ಮಾಡಿದರು. 

ಟೊಯೋಟಾ ಮಿರೈ ವಿಶೇಷತೆ:
ಎರಡನೇ ತಲೆಮಾರಿನ ಹೈಡ್ರೋಜನ್ ಇಂಧನ ಕೋಶ ವಿದ್ಯುತ್ ವಾಹನವಾದ (FCEV) ಟೊಯೋಟಾ `ಮಿರೈ’ ಹೈಡ್ರೋಜನ್ ಮತ್ತು ಆಮ್ಲಜನಕದ ನಡುವಿನ ರಾಸಾಯನಿಕ ಕ್ರಿಯೆ ಮೂಲಕ ವಿದ್ಯುತ್ ಉತ್ಪಾದಿಸುತ್ತದೆ. ಉಪ-ಉತ್ಪನ್ನವಾಗಿ ನೀರಿನ ಆವಿಯನ್ನು ಮಾತ್ರ ಹೊರಸೂಸುತ್ತದೆ. ಸರಿಸುಮಾರು 650 ಕಿ.ಮೀ. ಚಾಲನಾ ವ್ಯಾಪ್ತಿ ಮತ್ತು ಐದು ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಇಂಧನ ತುಂಬುವ ಸಾಮರ್ಥ್ಯ ಹೊಂದಿದೆ. ಇದು ವಿಶ್ವದ ಅತ್ಯಂತ ಮುಂದುವರಿದ ಮತ್ತು ಪರಿಣಾಮಕಾರಿ ಶೂನ್ಯ-ಹೊರಸೂಸುವಿಕೆ ವಾಹನಗಳಲ್ಲಿ ಒಂದಾಗಿದೆ.


Spread the love
Share:

administrator

Leave a Reply

Your email address will not be published. Required fields are marked *