Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಿನಿಮೀಯ ಶೈಲಿಯಲ್ಲಿ ಚೇಸ್‌ ಮಾಡಿದ ಪೊಲೀಸರು-ಪೊಲೀಸರಿಗೆಯೇ ಫೈರಿಂಗ್ ಮಾಡಿದ ಬೇಟೆಗಾರರ ಬಂಧನ

Spread the love

ಬಿಕಾನೇರ್: ಸಿನಿಮೀಯ ಶೈಲಿಯ ಘಟನೆಯೊಂದರಲ್ಲಿ ಪೊಲೀಸರು 60 ಕಿ,ಮೀ ದೂರ ಚೇಸಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿರುವ ಘಟನೆ ರಾಜಸ್ಥಾನದ ಬಿಕಾನೇರ್​ನಲ್ಲಿ ನಡೆದಿದೆ. ಜಿಂಕೆ ಬೇಟೆಯಾಡಿದ ಸಂಬಂಧ ಪೊಲೀಸರು ಆರು ಮಂದಿ ಆರೋಪಿಗಳನ್ನು ಚೇಸ್ ಮಾಡಿ ಬಂಧಿಸಿದ್ದು, ಆರಕ್ಷಕರ ಕಾರ್ಯ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ರಾಜಸ್ಥಾನದ ಬಿಕಾನೇರ್​ನಲ್ಲಿ ಪಂಜಾಬ್ ಮೂಲದ ಆರು ಸೇರಿದಂತೆ ಆರು ಮಂದಿ ಜಿಂಕೆಯನ್ನು ಬೇಟೆಯಾಡಿದ್ದರು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿದಾಗ ಆರೋಪಿಗಳು ಗುಂಡು (Firing) ಹಾರಿಸಿ ತಪ್ಪಿಸಿಕೊಂಡಿದ್ದು, ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಆರೋಪಿಗಳನ್ನು 60 ಕಿಲೋಮೀಟರ್ ದೂರ ಬೆನ್ನಟ್ಟಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ಬಂಧಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಹಾಗೂ ಸ್ಥಳೀಯರು ಆರೋಪಿಗಳನ್ನು ಹಿಡಿದು ಧರ್ಮದೇಟು ನೀಡುತ್ತಿರುವುದನ್ನು ನೋಡಬಹುದಾಗಿದೆ. streetdogsofbombay ಎಂಬ ಇನ್ಸ್​ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಪಂಜಾಬ್ ಮೂಲದ ಆರು ಮಂದಿ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿದ್ದಕ್ಕಾಗಿ ಬಂಧಿಸಲಾಗಿದೆ. ಬಂಧಿಸಲು ಮುಂದಾದಾಗ ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದು, ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರನ್ನು ಸ್ನೇಹಬೀರ್ ಸಿಂಗ್, ಹರ್ಜೀತ್ ಸಿಂಗ್, ಸಾಹಿಲ್ ಕಟಾರಿಯಾ, ಸುಖವಂತ್ ಸಿಂಗ್, ಸುಖಜೀತ್ ಸಿಂಗ್ ಮತ್ತು ಗುರುಕೀರತ್ ಸಿಂಗ್ ಸೇರಿದಂತೆ ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ಬಿಷ್ಣೋಯ್ ಸಮುದಾಯವು ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *