ಮುಮ್ತಾಝ್ ಅಲಿ ಪ್ರಕರಣ: ಪ್ರಮುಖ ಆರೋಪಿ ರೆಹಮತ್‌ಗೆ ಹೈಕೋರ್ಟ್ ಜಾಮೀನು

2024ರ ಅ.7ರಂದು ಮುತ್ತಾಝ್ ಅಲಿ ಅವರ ಕಾರು ಅಪಘಾತಕ್ಕೀಡಾದ ಸ್ಥಿತಿಯಲ್ಲಿ ಕೂಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಅವರು ಫಲ್ಗುಣಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಮಗಳು ನಾಪತ್ತೆ ಪ್ರಕರಣ ದಾಖಲಿಸಿದ್ದರೆ, ಸಹೋದರ ಹೈದರ್ ಅಲಿ ಅವರು, ರೆಹಮಾತ್, ಅಬ್ದುಲ್ ಸತ್ತಾರ್, ಕಲಂದರ್ ಶಾಫಿ, ಮುಸ್ತಫಾ, ಶುಐಬ್, ಸಿರಾಜ್ ಎಂಬವರು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿರುವ ಕುರಿತು ಶಂಕೆ ವ್ಯಕ್ತ ಪಡಿಸಿ ದೂರು ನೀಡಿದ್ದರು.

ಪರ ದೂರು ಆಧರಿಸಿ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ವ್ಯತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಕೂಳೂರು ನದಿಯಲ್ಲಿ ಹುಡುಕಾಟ ಆರಂಭಿಸಲಾಗಿತ್ತು.ಅ.8ರಂದು ಮುತ್ತಾಝ್ ಅಲಿ ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿತ್ತು.