Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸಹಪಾಠಿಗಳು!

Spread the love

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿರುವ ಹಿಂದೂ ಕಾಲೇಜಿನ ಮುಂಭಾಗದಲ್ಲಿ ಗುರುವಾರ ಮಧ್ಯಾಹ್ನ ಭೀಕರ ಘಟನೆಯೊಂದು ನಡೆದಿದ್ದು, 19 ವರ್ಷದ ವಿದ್ಯಾರ್ಥಿಯ ಮೇಲೆ ಆತನ ಸಹಪಾಠಿಗಳು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾರೆ.

ಬಿ.ಕಾಂ ವಿದ್ಯಾರ್ಥಿ ಫರ್ಹಾದ್ ಅಲಿ ಎಂಬವರು ಪರೀಕ್ಷಾ ಕೇಂದ್ರದಿಂದ ಹೊರಬರುತ್ತಿದ್ದಾಗ ಈ ಘಟನೆ ನಡೆದಿದೆ. ಆರೋಪಿಗಳನ್ನು ಅದೇ ಕಾಲೇಜಿನ ಬಿಎ 3ನೇ ಸೆಮಿಸ್ಟರ್ ವಿದ್ಯಾರ್ಥಿ ಆರುಷ್ ಸಿಂಗ್ (21) ಮತ್ತು ಆತನ ಸ್ನೇಹಿತ ದೀಪಕ್ ಕುಮಾರ್ (20) ಎಂದು ಗುರುತಿಸಲಾಗಿದೆ.

ಫರ್ಹಾದ್ ಅಲಿ ಅವರು ಕಾಲೇಜು ಗೇಟಿನಿಂದ ಹೊರಬರುತ್ತಿದ್ದಂತೆ ಆರೋಪಿಗಳು ಅವರ ಮೇಲೆ ದಹನಕಾರಿ ವಸ್ತುವನ್ನು ಎರಚಿ ಬೆಂಕಿ ಹಚ್ಚಿದ್ದಾರೆ. ತಕ್ಷಣವೇ ಅಲ್ಲಿದ್ದವರು ಬೆಂಕಿ ನಂದಿಸಿ ಅವರನ್ನು ರಕ್ಷಿಸಿದ್ದಾರೆ.

ಗಾಯಾಳು ವಿದ್ಯಾರ್ಥಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ತೊಡೆ ಭಾಗದಲ್ಲಿ ಶೇ. 8ರಷ್ಟು ಸುಟ್ಟಗಾಯಗಳಾಗಿವೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ದಾಳಿಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಕಾಲೇಜು ಕ್ಯಾಂಪಸ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *