Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆಸ್ಕರ್ ಅಂಗಳದಲ್ಲಿ ‘ಕಾಂತಾರ’ ಘರ್ಜನೆ: ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಹೊಂಬಾಳೆ ಫಿಲ್ಮ್ಸ್‌ನ ಎರಡು ಸಿನಿಮಾಗಳಿಗೆ ಸ್ಥಾನ!

Spread the love

ಆಸ್ಕರ್ ವೇದಿಕೆಯಲ್ಲಿ ಹೊಂಬಾಳೆ ಫಿಲ್ಮ್ಸ್ (Hombale films) ಸದ್ದು ಮಾಡುವ ಸಮಯದ ಹತ್ತಿರ ಬರುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ಅಂಗಳಕ್ಕೆ  ಕಾಲಿಟ್ಟಿದೆ.

ʻಮಹಾವತಾರ್‌ ನರಸಿಂಹʼ ಹಾಗೂ ʻಕಾಂತಾರ: ಅಧ್ಯಾಯ 1ʼ (Kantara Chapter 1) ಚಿತ್ರಗಳು ಅಧಿಕೃತವಾಗಿ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಸ್ಥಾನ ಪಡೆದುಕೊಂಡಿವೆ. ಇದು ಭಾರತೀಯ ಚಿತ್ರರಂಗಕ್ಕೆ ಹೆಮ್ಮೆ ಹಾಗೂ ಐತಿಹಾಸಿಕ ಕ್ಷಣವಾಗಿದೆ.

ಆಸ್ಕರ್‌ ಪ್ರಶಸ್ತಿ ರೇಸ್‌ನಲ್ಲಿರುವ ಚಿತ್ರಗಳ ಅಂತಿಮ ಪಟ್ಟಿ ಜ.22 ರಂದು ಪ್ರಕಟವಾಗಲಿದೆ. ಮಾರ್ಚ್‌ 15 ರಂದು ಚಿತ್ರಗಳಿಗೆ ಆಸ್ಕರ್‌ ಪ್ರಶಸ್ತಿ ನೀಡಲಾಗುತ್ತದೆ.

ಕಳೆದ ವರ್ಷ ‘ಕಾಂತಾರ-1’ ಹಾಗೂ ‘ಮಹಾವತಾರ್‌ ನರಸಿಂಹ’ (Mahavatar narsimha) ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಕೋಟಿ ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದವು. ಚಿತ್ರಗಳನ್ನ ಆಸ್ಕರ್ ವೇದಿಕೆಗೆ ಕೊಂಡೊಯ್ಯುವ ಪ್ರಯತ್ನ ಮಾಡುವುದಾಗಿ ಹೊಂಬಾಳೆ ಸಂಸ್ಥೆ ಹೇಳಿತ್ತು. ಆನಿಮೇಟೆಡ್‌ ವಿಭಾಗದಲ್ಲಿ ‘ಮಹಾವತಾರ್‌ ನರಸಿಂಹ’ ಜನರಲ್‌ ಲಿಸ್ಟ್‌ನಲ್ಲಿ ಸ್ಥಾನ ಪಡೆದಿವೆ. ಈ ವರ್ಷದ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಕಾಣಿಸಿಕೊಂಡ 5 ಭಾರತೀಯ ಚಿತ್ರಗಳಲ್ಲಿ 2 ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್ ಸಿನಿಮಾ ಅನ್ನೋದು ಮತ್ತೊಂದು ವಿಶೇಷ.

ಇದೀಗ ‘ಕಾಂತಾರ ಚಾಪ್ಟರ್‌ – 1 ಹಾಗೂ ʻಮಹಾವತಾರ್‌ ನರಸಿಂಹʼ ಎರಡೂ ಚಿತ್ರಗಳು ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಜಾಗ ಮಾಡಿಕೊಂಡು ಆಸ್ಕರ್ ವಿಭಾಗದಲ್ಲಿ ಪರಿಗಣನೆಗೆ ಒಳಪಟ್ಟಿರುವುದು ಸಂತಸದ ಸಂಗತಿ.

ಈವರೆಗೆ ಭಾರತದ ಕೆಲ ಡಾಕ್ಯುಮೆಂಟರಿ, ಶಾರ್ಟ್‌ ಫಿಲ್ಮ್‌ಗಳಿಗೆ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ. ಫೀಚರ್ ಸಿನಿಮಾಗಳ ವಿಭಾಗದಲ್ಲಿ ಪ್ರಶಸ್ತಿಗಳನ್ನು ಪಡೆಯಲು ಫಿಲ್ಮ್ ಮೇಕರ್ಸ್ ಪ್ರಯತ್ನಿಸುತ್ತಲೇ ಇದ್ದಾರೆ. ಭಾರತದಲ್ಲಿ ನಿರ್ಮಾಣವಾದ ಯಾವುದೇ ಚಿತ್ರಕ್ಕೆ ಆಸ್ಕರ್ ಸಿಕ್ಕಿಲ್ಲ. ಭಾರತೀಯ ಚಿತ್ರರಂಗದ ಈ ಎರಡೂ ಸಿನಿಮಾಗಳು ಈಗ ಹಾಲಿವುಡ್ ಸಿನಿಮಾಗಳ ಜೊತೆ ಆಸ್ಕರ್ ಪ್ರಶಸ್ತಿಗಾಗಿ ಪೈಪೋಟಿ ನಡೆಸುತ್ತಿವೆ.

ಈ ಮೊದಲು ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ದಾಖಲೆ ಬರೆದಿತ್ತು. ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆ ಮಾಡಿ ರೇಸ್​​ನಲ್ಲಿ ಈ ಹಾಡು ಸ್ಥಾನ ಪಡೆದುಕೊಂಡಿತ್ತು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ರಿಷಬ್ ನಿರ್ದೇಶನ ಮಾಡಿ, ನಟಿಸಿದ್ದಾರೆ. ರುಕ್ಮಿಣಿ ವಸಂತ್, ಜಯರಾಮ್, ಗುಲ್ಶನ್ ದೇವಯ್ಯ ಸೇರಿದಂತೆ ಅನೇಕರು ಚಿತ್ರದಲ್ಲಿ ನಟಿಸಿದ್ದಾರೆ. ʻಕಾಂತಾರ ಚಾಪ್ಟರ್-1‌ʼ ಸಿನಿಮಾ ಆಸ್ಕರ್ ಅಂತಿಮ ನಾಮಿನೇಷನ್ ಪಟ್ಟಿಗೆ ಎಂಟ್ರಿ ಕೊಟ್ಟರೂ ಅದು ದೊಡ್ಡ ಸಾಧನೆ ಆಗಲಿದೆ.


Spread the love
Share:

administrator

Leave a Reply

Your email address will not be published. Required fields are marked *