Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬರೀ 200 ರೂ. ಜಗಳಕ್ಕೆ ಪತ್ನಿ ಆತ್ಮಹ*ತ್ಯೆ

Spread the love

ಬೆಂಗಳೂರು: 200 ರೂ. ವಿಚಾರಕ್ಕೆ ಪತಿ-ಪತ್ನಿ ನಡುವೆ ಗಲಾಟೆ ನಡೆದು ಮನನೊಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಸುಮಾ (30) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಸುಮಾ 8 ವರ್ಷಗಳ ಹಿಂದೆ ಚಂದ್ರಶೇಖರ್ ಜೊತೆ ಮದುವೆಯಾಗಿದ್ದರು. ಧರ್ಮಸ್ಥಳ ಸ್ವಸಹಾಯ ಸಂಘದ ಕಂತು ಕಟ್ಟಲೆಂದು ಸುಮಾ ಗಂಡನಿಗೆ ಕಾಣದಂತೆ 1,300 ರೂ. ಮನೆಯಲ್ಲಿಟ್ಟಿದ್ದರು. 1,300 ರೂ. ಪೈಕಿ ಚಂದ್ರಶೇಖರ್ ಸಬೂಬು ಹೇಳಿ 200 ರೂ. ಸ್ವಂತ ಖರ್ಚಿಗೆ ಬಳಸಿದ್ದ. ಈ ಸಂಬಂಧ ಶುಕ್ರವಾರ ಇಬ್ಬರ ನಡುವೆ ಜಗಳವಾಗಿದೆ.

ಇದರಿಂದ ಮನನೊಂದ ಸುಮಾ ಅವರು ಪತಿ ಹಾಗೂ ಅತ್ತೆ ಕೆಲಸಕ್ಕೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಊಟಕ್ಕೆಂದು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಸುಮಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *