Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

‘ಎಐ ಯುವತಿ’ಯ ಬಲೆಯಲ್ಲಿ ಬೆಂಗಳೂರು ಯುವಕ: ಬೆತ್ತಲೆ ವಿಡಿಯೋ ಕಾಲ್ ಮಾಡಿ ₹1.53 ಲಕ್ಷ ಪಂಗನಾಮ!

Spread the love

ಬೆಂಗಳೂರು: ಎಐ ಯುವತಿಯ (AI Girl) ಮೋಹಕ್ಕೆ ಬಿದ್ದು ಯುವಕನೊಬ್ಬ ಒಂದೂವರೆ ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾನೆ.

ಬೆಂಗಳೂರಿನ 26 ವರ್ಷದ ಯುವಕನೊಬ್ಬ Happn ಡೇಟಿಂಗ್ ಆ್ಯಪ್‌ನಲ್ಲಿ (Dating App) ಖಾತೆ ತೆರೆದಿದ್ದ. ಈ ಖಾತೆಗೆ ಇಶಾನಿ ಎಂಬ ಯುವತಿಯಿಂದ ಫ್ರೆಂಡ್‌ ರಿಕ್ವೆಸ್ಟ್‌ ಬಂದಿದೆ. ಬಳಿಕ ಮೊಬೈಲ್ ನಂಬರ್ ಶೇರ್ ಆಗಿ ಖಾಸಗಿ ವಿಚಾರಗಳನ್ನು ಚಾಟಿಂಗ್ ಮಾಡಿದ್ದರು. 

ಕೆಲದಿನಗಳ‌ ಹಿಂದೆ ಯುವತಿಯ ಮೊಬೈಲಿನಿಂದ ವಿಡಿಯೋ ಕಾಲ್ ಬಂದಿತ್ತು. ಆ ವಿಡಿಯೋ ಕಾಲ್‌ನಲ್ಲಿ ಯುವತಿ ಬೆತ್ತಲಾಗಿದ್ದಳು‌.‌ ನಂತರ ನೀನು ಬಟ್ಟೆ ಬಿಚ್ಚು ಎಂದು ಯುವಕನ ಬಟ್ಟೆ ಬಿಚ್ಚಿಸಿದ್ದಳು. ಯುವಕ ಬೆತ್ತಲಾಗಿದ್ದನ್ನ ರೆಕಾರ್ಡ್ ಮಾಡಿಕೊಂಡಿದ್ದ ಆರೋಪಿಗಳು‌ ನಂತರ ಯುವಕನಿಗೆ ಆತನ ಬೆತ್ತಲೆ ಫೋಟೊಗಳನ್ನು ಕಳುಹಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ.

ಯುವಕನಿಂದ ಹಂತ ಹಂತವಾಗಿ 1.53 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಇನ್ನೂ ಹಣ ಕೇಳಿದಾಗ ಕೇಂದ್ರ ಸೆನ್ ಠಾಣೆಗೆ ಯುವಕ ದೂರು ನೀಡಿದ್ದಾನೆ. ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು, ಪ್ರಾಥಮಿಕ ತನಿಖೆಯಲ್ಲಿ ಎಐ ಯುವತಿ ಮೂಲಕ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಸದ್ಯ ಕೇಸ್ ದಾಖಲಿಸಿ ಆರೋಪಿಗಳಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *