Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ ಸುಪ್ರೀಂಕೋರ್ಟ್!

Spread the love

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ (GBA) ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ (Election) ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ.

ಜಿಬಿಎಗೆ ಚುನಾವಣೆ ನಡೆಸುವ ಸಂಬಂಧ ಇಂದು ಸುಪ್ರೀಂ ಕೋರ್ಟ್‌ನಲ್ಲಿ (Supreme Court)  ರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು.

ಕಡೆಯ ಹಂತದ ಮೀಸಲಾತಿ ಪ್ರಕ್ರಿಯೆಗಳು ನಡೆಯುತ್ತಿದ್ದು ಮೀಸಲಾತಿ ಪ್ರಕ್ರಿಯೆ ಫೆಬ್ರವರಿ 28 ವರೆಗೂ ನಡೆಯಲಿದೆ. ಮೀಸಲಾತಿ ಪ್ರಕ್ರಿಯೆ ಬಳಿಕ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಸರ್ಕಾರದ ವಕೀಲ ಅಭಿಷೇಕ್‌ ಮನುಸಿಂಘ್ವಿ ತಿಳಿಸಿದರು.

ಚುನಾವಣಾ ಆಯೋಗದ ಪರ ವಕೀಲರು, ಮಾರ್ಚ್ 16ರ ವೇಳೆಗೆ ಮತದಾರರ ಪರಿಶೀಲನೆ ಅಂತ್ಯವಾಗಲಿದೆ. ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಮೇ ಕೊನೆ ವಾರದವರೆಗೂ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಂತಿಮವಾಗಿ ಚುನಾವಣಾ ಪ್ರಕ್ರಿಯೆ ಮುಗಿಸಲು ಎಷ್ಟು ಸಮಯ ಬೇಕು ಎಂದು ಕೋರ್ಟ್‌ ಪ್ರಶ್ನಿಸಿತು. ಇದಕ್ಕೆ ಜೂನ್‌ವರೆಗೂ ಸಮಯ ಬೇಕಾಗಬಹುದು ಎಂದು ಆಯೋಗ ಉತ್ತರಿಸಿತು. ಅಂತಿಮವಾಗಿ ಸುಪ್ರೀಂಕೋರ್ಟ್ ಜೂನ್ 30 ರೊಳಗೆ ಜಿಬಿಎ ಚುನಾವಣೆ ನಡೆಸಲು ನಿರ್ದೇಶನ ನೀಡಿತು. ಇದರ ಜೊತೆ ರಾಜ್ಯ ಸರ್ಕಾರಕ್ಕೆ ಮತ್ತೆ ಸಮಯ ಕೇಳದಂತೆ ಎಚ್ಚರಿಕೆ ನೀಡಿತು.


Spread the love
Share:

administrator

Leave a Reply

Your email address will not be published. Required fields are marked *