Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೂಡಬಿದಿರೆ: ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನ ಅಡ್ಡಗಟ್ಟಿ ಮಾನಭಂಗ ಯತ್ನ

Spread the love

ಮೂಡುಬಿದಿರೆ: ಸಂಜೆ ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ನಿರ್ಜನ ಪ್ರದೇಶದಲ್ಲಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್ ಬಂಧಿತ ಆರೋಪಿ. ಮಾರ್ಚ್ 8ರಂದು ಸಂಜೆ ಟ್ಯೂಷನ್ ಮುಗಿಸಿ ಸೈಕಲ್‌ನಲ್ಲಿ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ಆರೋಪಿ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗಿದ್ದಾನೆ. ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡಗಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಬಾಲಕಿ ಆತನಿಂದ ತಪ್ಪಿಸಿಕೊಂಡು ಸೈಕಲ್‌ ಅಲ್ಲೇ ಬಿಟ್ಟು, ಮನೆಗೆ ಓಡಿ ಹೋಗಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ ಎನ್ನಲಾಗಿದೆ. ಘಟನೆಯ ಬಳಿಕ ಆರೋಪಿಯು ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಬಾಲಕಿಯ ಮನೆಯವರು ದೂರು ನೀಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *