Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೂಡಿಗೆರೆ ವಲಯದ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗೆ ಆಹುತಿ

Spread the love

ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು (Chikkamagaluru) ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ (Charmadi Ghat) ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿ (Wildfire) ಕಾಣಿಸಿಕೊಂಡಿದೆ. ಪರಿಣಾಮ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗಿದೆ.

ಮೂಡಿಗೆರೆ (Mudigere) ಅರಣ್ಯ (Forest) ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ. ಗಾಳಿಯ ವೇಗ ಕೂಡ ಹೆಚ್ಚಿರುವುದರಿಂದ ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ಹರಡಿದ್ದು ಅರಣ್ಯ ಸಂಪತ್ತಿಗೆ ತೀವ್ರವಾದ ಹಾನಿಯಾಗುವ ಆತಂಕ ಎದುರಾಗಿದೆ

ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸಂಚರಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.

ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ತೀವ್ರ ಪ್ರಯತ್ನಗಳು ಮುಂದುವರಿದಿವೆ. ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಚಾರ್ಮಾಡಿ ಘಾಟಿಯ ರಸ್ತೆ ಉದ್ದಕ್ಕೂ ಬೆಂಕಿ ರೇಖೆಗಳನ್ನು ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಬೆಂಕಿ ರೇಖೆ ನಿರ್ಮಿಸುವುದರಿಂದ ಸಾವಿರಾರು ಎಕರೆ ಅರಣ್ಯ ಪ್ರದೇಶವನ್ನು ಬೆಂಕಿಯಿಂದ ತಪ್ಪಿಸಬಹುದು ಎಂಬುದು ಸ್ಥಳಿಯರ ವಾದ.


Spread the love
Share:

administrator

Leave a Reply

Your email address will not be published. Required fields are marked *