Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಾಲದ ಹಣ ತಂದ ಸಾವು, ವಿಡಿಯೋ ಮಾಡಿ ಪ್ರಾ*ಣ ಬಿಟ್ಟ ಸಜೀರ್!

Spread the love

ಕೊಡಗು: ಕೇರಳದ ವಯನಾಡಿನಲ್ಲಿ ಕರ್ನಾಟಕ ಮೂಲದ ಉದ್ಯಮಿ (businessman)  ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ (suicide) ಯತ್ನಿಸಿರುವಂತಹ ಘಟನೆ ನಡೆದಿದೆ. ದುರಂತದಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ, ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ. ಸಜೀರ್ ಪತ್ನಿಗೆ ಗಂಭೀರ ಗಾಯವಾಗಿದ್ದು, ಕಲ್ಲಿಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

ನಡೆದಿದ್ದೇನು?

ಕೊಡಗು ಜಿಲ್ಲೆಯ ಉದ್ಯಮಿ ಸಜೀರ್​​​ ಕುಟ್ಟ ಗ್ರಾಮದಲ್ಲಿ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಬಾಪು ಎಂಬಾತ ಸಜೀರ್​​ಗೆ 20 ಲಕ್ಷ ರೂ. ನೀಡಬೇಕಿತ್ತು. ಸಾಲ ಪಡೆದಿದ್ದ ಬಾಪುನ ಮನೆ ಎದುರೇ ಸಜೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಆತ್ಮಹತ್ಯೆಗೂ ಮುನ್ನ ಕಾರಿನಲ್ಲೇ ಕುಳಿತು ಉದ್ಯಮಿ ಸಜೀರ್​ ವಿಡಿಯೋ ರೆಕಾರ್ಡ್ ಮಾಡಿದ್ದು, ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಬಾಪು ಕಾರಣ ಎಂದು ಹೇಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *