Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು ರನ್‌ವೇಗೆ ಹಾರಿ ಬಂತು ಬೃಹತ್ ಬಲೂನ್: ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

Spread the love

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಮತ್ತೊಂದು ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 5ರಂದು ವಿಮಾನ ನಿಲ್ದಾಣದ ರನ್‌ವೇ ಪ್ರದೇಶಕ್ಕೆ ಹಾರಿ ಬಂದ ಬೃಹತ್ ಬಲೂನ್ ಆತಂಕ ಸೃಷ್ಟಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಏರ್ಪೋರ್ಟ್​ ರನ್​ವೇಗೆ ಬೀದಿ ನಾಯಿಗಳು ಲಗ್ಗೆಯಿಟ್ಟಿದ್ದು ನಿಲ್ದಾಣದ ಭದ್ರತಾ ಲೋಪದ ಕುರಿತಾಗಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೊಮ್ಮೆ ಅಂತದ್ದೇ ಘಟನೆ ನಡೆದಿದೆ.

ವಿಮಾನಗಳು ಟೇಕ್‌ಆಫ್ ಮತ್ತು ಲ್ಯಾಂಡಿಂಗ್ ಆಗುವ ಪ್ರಮುಖ ರನ್‌ವೇ ಭಾಗಕ್ಕೆ ಈ ಬಲೂನ್ ಹಾರಿ ಬಂದಿದ್ದು, ಅದೃಷ್ಟವಶಾತ್ ಆ ಸಮಯದಲ್ಲಿ ಯಾವುದೇ ವಿಮಾನಗಳ ಸಂಚಾರ ಇಲ್ಲದ ಕಾರಣ ಭಾರೀ ಅಪಾಯ ತಪ್ಪಿದೆ. ಈ ಬೃಹತ್ ಬಲೂನ್ ಬಿಸಿಡಿ ಕನ್‌ಸ್ಟ್ರಕ್ಷನ್ ಎಂಬ ಖಾಸಗಿ ಕಂಪನಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಕನ್‌ಸ್ಟ್ರಕ್ಷನ್ ಸ್ಥಳದ ಬಳಿ ಅಳವಡಿಸಲಾಗಿದ್ದ ಬಲೂನ್ ಗಾಳಿಯ ಒತ್ತಡಕ್ಕೆ ದಾರ ಕಟ್ ಆಗಿ ರನ್‌ವೇ ಕಡೆಗೆ ಹಾರಿ ಬಂದಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಮಾಹಿತಿ ದೊರೆತ ತಕ್ಷಣ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಬಿಸಿಡಿ ಕನ್‌ಸ್ಟ್ರಕ್ಷನ್ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏರ್​ಪೋರ್ಟ್​ನಲ್ಲಿ 2 ಕೋಟಿ ರೂ. ಗಾಂಜಾ ವಶ!

ಇದೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಪ್ರಕರಣದಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬ್ಯಾಂಕಾಕ್ ಹಾಗೂ ಹಾಂಗ್‌ಕಾಂಗ್‌ನಿಂದ ಆಗಮಿಸಿದ್ದ ಇಬ್ಬರು ಪ್ರಯಾಣಿಕರ ಬಳಿ ಈ ಮಾದಕ ವಸ್ತು ಪತ್ತೆಯಾಗಿದೆ. ಪ್ರಯಾಣಿಕರು ಲಗೇಜ್ ಬ್ಯಾಗ್‌ನ ಕೆಳಭಾಗದಲ್ಲಿ ಅಧಿಕಾರಿಗಳಿಗೆ ಅನುಮಾನ ಬಾರದಂತೆ ಹೈಡ್ರೋಪೋನಿಕ್ ಗಾಂಜಾವನ್ನು ಅಡಗಿಸಿಟ್ಟಿದ್ದರು ಎಂದು ತಿಳಿದು ಬಂದಿದೆ. ತಪಾಸಣೆ ವೇಳೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಲಗೇಜ್ ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ.

ಈ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 7.5 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ 2 ಕೋಟಿ ರೂ. ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಎರಡು ದಿನಗಳ ಹಿಂದೆಯೂ ಏರ್​ಪೋರ್ಟ್​ನಲ್ಲಿ 3 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಯಾದ ಕಾರಣ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.


Spread the love
Share:

administrator

Leave a Reply

Your email address will not be published. Required fields are marked *