Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಣೇಬೆನ್ನೂರು: ನರ್ಸ್ ಅನುಮಾನಾಸ್ಪದ ಸಾವು – ಹತ್ಯೆ ದೃಢ, ಓರ್ವ ಬಂಧನ

Spread the love

ಹಾವೇರಿ: ರಾಣೇಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಅನುಮಾನಾಸ್ಪದ ಸಾವು ಬಗ್ಗೆ ಮೂವರ ಮೇಲೆ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದ್ದು, ಬಂಧಿತನನ್ನು ನಯಾಜ್‌ ಎಂದು ಗುರುತಿಸಲಾಗಿದೆ.

ಮೃತ ಯುವತಿಯನ್ನು ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ರಮೇಶ್ ಬ್ಯಾಡಗಿ (22) ಎಂದು ಗುರುತಿಸಲಾಗಿದೆ.

ಮಾ.6 ರಂದು ಯುವತಿಯ ಮೃತದೇಹ ರಾಣೇಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಪತ್ತೆಯಾಗಿತ್ತು. ಮೊದಲು ಅಪರಿಚಿತ ಯುವತಿಯ ಶವ ಎಂದು ಹಲಗೇರಿ ಪೊಲೀಸರು ಘೋಷಿಸಿದ್ದರು. ಬಳಿಕ ವಾರಸುದಾರರು ಯಾರೂ ಇಲ್ಲದ ಹಿನ್ನೆಲೆ, ಮರಣೋತ್ತರ ಪರೀಕ್ಷೆ ನಡೆಸಿ ಕಾನೂನು ಪ್ರಕಾರ ಸ್ವಾತಿ ಶವವನ್ನು ಹೂತು ಹಾಕಲಾಗಿತ್ತು.

ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ದೃಢಪಟ್ಟಿದೆ. ಬಳಿಕ ತನಿಖೆ ತೀವ್ರಗೊಳಿಸಿದ ಹಲಗೇರಿ ಪೊಲೀಸರು, ಮಾ.3 ರಂದು ಕಾಣೆಯಾಗಿದ್ದ ಯುವತಿಯ ಗುರುತನ್ನು ಪತ್ತೆಹಚ್ಚಿದ್ದರು. ಇನ್ನೂ ಸ್ವಾತಿ ಪೋಷಕರು, ಹಿರೇಕೇರೂರು ಪೊಲೀಸ್ ಠಾಣೆಯಲ್ಲಿ ಆಕೆ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು ಎಂದು ತಿಳಿದು ಬಂದಿದೆ.
ಸ್ವಾತಿ ತಂದೆ ಮೃತಪಟ್ಟಿದ್ದು, ತಾಯಿ ಜೊತೆ ವಾಸವಿದ್ದರು. ಮೂವರ ಮೇಲೆ ಶಂಕೆ ವ್ಯಕ್ತವಾಗಿದ್ದು, ತನಿಖೆಯನ್ನು ಹಲಗೇರಿ ಪೊಲೀಸರು ತೀವ್ರಗೊಳಿಸಿದ್ದಾರೆ. ಹಿಂದೂ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಜಸ್ಟೀಸ್ ಫಾರ್ ಸ್ವಾತಿ ಅಭಿಯಾನ ಆರಂಭಿಸಿದ್ದು, ಹಂತಕರನ್ನು ಪತ್ತೆ ಹಚ್ಚಿ, ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *