ಶಿರ್ವದಲ್ಲಿ ಕಾರು ಭಸ್ಮ: ಐವರು ಬಚಾವ್!

ಉಡುಪಿ: ಕಾಪು ತಾಲೂಕಿನ ಶಿರ್ವ ಎಂಬಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಚಾಲಕ ಸೇರಿದಂತೆ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಶಿರ್ವ ಕಡೆ ಬರುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರು ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದೆ. ಬೆಂಕಿಯೂ ಎಂಜಿನ್ ಭಾಗದಲ್ಲಿ ಮೊದಲು ಕಾಣಿಸಿಕೊಂಡ ಹೊಗೆ ಬಂದಿದೆ. ಇದನ್ನು ನೋಡಿ ಚಾಲಕ ಕಾರನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾನೆ. ಕಾರಿನಿಂದ ಎಲ್ಲರೂ ಇಳಿಯುತ್ತಿದ್ದಂತೆ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪೈಪ್ ಮೂಲಕ ಬೆಂಕಿ ನಂದಿಸಲು ಸ್ಥಳೀಯರ ಪ್ರಯತ್ನ ಮಾಡಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಕುಟುಂಬದ ಜೀವ ಉಳಿದಿದೆ. ಇನ್ನು ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದು ಇನ್ನು ತಿಳಿದು ಬಂದಿಲ್ಲ.
