Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಮಾನಕ್ಕೆ ಬೆಂಕಿ – ಅಪಾಯದ ಅಂಚಿನಲ್ಲಿದ್ದ ಪ್ರಯಾಣಿಕರು

Spread the love

ಡೆನ್ವರ್: ಪ್ರಯಾಣಿಕರನ್ನು ಹೊತ್ತು ಡಲ್ಲಾಸ್‌ಗೆ ಹಾರಾಟ ನಡೆಸಬೇಕಿದ್ದ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಗುರುವಾರ(ಮಾ.13) ರಂದು ಸಂಭವಿಸಿದ್ದು ಅದೃಷ್ಟವಶಾತ್ ವಿಮಾನದಲ್ಲಿದ್ದ ಪ್ರಯಾಣಿಕರು, ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ.

ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ಅಮೆರಿಕನ್ ಏರ್‌ಲೈನ್ಸ್ ವಿಮಾನ ಡೆನ್ವರ್ ವಿಮಾನ ನಿಲ್ದಾಣದಿಂದ ಡಲ್ಲಾಸ್‌ಗೆ ಹೊರಡಲು ತಯಾರಿ ನಡೆಸುತ್ತಿತ್ತು, ವಿಮಾನದಲ್ಲಿ ಆರು ಸಿಬ್ಬಂದಿ ಸೇರಿದಂತೆ 178 ಮಂದಿ ಇದ್ದರು ಎನ್ನಲಾಗಿದೆ. ಈ ವೇಳೆ ವಿಮಾನದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ ಕೂಡಲೇ ವಿಮಾನದೊಳಗಿದ್ದ ಪ್ರಯಾಣಿಕರು ಜೀವಭಯದಿಂದ ವಿಮಾನದ ರೆಕ್ಕೆಯ ಮೇಲೆ ನಿಂತು ರಕ್ಷಣೆಗಾಗಿ ಕೂಗಿದ್ದಾರೆ ಅಲ್ಲದೆ ವಿಮಾನಯಾನ ಸಿಬ್ಬಂದಿ ಕೂಡಲೇ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ ಅಲ್ಲದೆ ವಿಮಾನದ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಘಟನೆಯಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿದ್ದು ರಕ್ಷಣಾ ತಂಡ ಕೂಡಲೇ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅವಘಡ ತಪ್ಪಿದಂತಾಗಿದೆ.

ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರಕ್ಷಣಾ ತಂಡ ವಿಮಾನದಲ್ಲಿರುವ ಪ್ರಯಾಣಿಕರನ್ನು ರಕ್ಷಣೆ ಮಾಡುತ್ತಿರುವುದು ಕಾಣಬಹುದಾಗಿದೆ.


Spread the love
Share:

administrator

Leave a Reply

Your email address will not be published. Required fields are marked *