Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೂಡುಬಿದಿರೆ: ಕಾರು-ಬೈಕ್ ಭೀಕರ ಢಿಕ್ಕಿ; ಚಿಕಿತ್ಸೆ ಫಲಿಸದೆ ಪಿಯುಸಿ ವಿದ್ಯಾರ್ಥಿ ಶ್ರವಣ್ ಸಾ*ವು!

Spread the love

ಮೂಡುಬಿದಿರೆ: ತಾಲೂಕಿನ ಬನ್ನಡ್ಕದಲ್ಲಿ ಗುರುವಾರ ರಾತ್ರಿ ನಡೆದ ಕಾರು-ಬೈಕ್ ಢಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಿಯುಸಿ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ ಹಾಗೂ ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತ ದುರ್ದೈವಿ.ಕಾಮಗಾರಿ ಹಂತದಲ್ಲಿರುವ ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ದೈವಸ್ಥಾನದ ಸಮೀಪ ಈ ಅಪಘಾತ ನಡೆದಿದೆ. ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಅವರೊಂದಿಗೆ ಶ್ರವಣ್ ಸಹ ಸವಾರರಾಗಿದ್ದರು ಎಂದು ಹೇಳಲಾಗಿದೆ.ಕಾರ್ಕಳ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಮೊದಲು ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಶ್ರವಣ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.


Spread the love
Share:

administrator

Leave a Reply

Your email address will not be published. Required fields are marked *