ನನ್ನ ನಂತರ ಹೆಂಡತಿ ಅನಾಥಳಾಗಬಾರದು ಎಂದು ಕೊಂದೇ ಬಿಟ್ಟ! ಆವಲಹಳ್ಳಿಯಲ್ಲಿ ಇಸ್ರೋ ನಿವೃತ್ತ ನೌಕರನ ಕೃತ್ಯ

ಬೆಂಗಳೂರು: ಇಸ್ರೋ ಸಂಸ್ಥೆ ನಿವೃತ್ತ ನೌಕರನಿಂದ ಉಸಿರುಗಟ್ಟಿಸಿ ಪತ್ನಿಯ ಕೊಲೆ (murder) ಮಾಡಿರುವಂತಹ ಘಟನೆ ಬೆಂಗಳೂರಿನ ಆವಲಹಳ್ಳಿಯ ವಿರ್ಟುಸೊ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಪತ್ನಿ (wife) ಸಧ್ಯಾರ ಉಸಿರುಗಟ್ಟಿಸಿ ಪತಿ ನಾಗಲೇಶ್ವರ ರಾವ್ರಿಂದ ಕೊಲೆ ಮಾಡಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆಲವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?
ನಾಗಲೇಶ್ವರ ರಾವ್, ಇಸ್ರೋ ಸಂಸ್ಥೆಯ ನಿವೃತ್ತ ನೌಕರರು. ಪತ್ನಿ ಸಧ್ಯಾ ಅವರೊಂದಿಗೆ ವಿರ್ಟುಸೊ ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದರು. ಪ್ರಾಥಮಿಕ ವಿಚಾರಣೆ ವೇಳೆ ನಾನು ಸತ್ತರೆ ಪತ್ನಿಯನ್ನು ಯಾರು ನೋಡುಕೊಳ್ಳುತ್ತಾರೆ, ಯಾರೂ ಸಂಬಂಧಿಕರು ಇಲ್ಲ ಆಕೆಯ ಮುಂದಿನ ಜೀವನ ಹೇಗೆ? ಹಾಗಾಗಿ ಆಕೆಯನ್ನ ಕೊಲೆ ಮಾಡಿದೆ ಎನ್ನುತ್ತಿರುವ ನಾಗಲೇಶ್ವರ ರಾವ್, ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ. ಇನ್ನು ದಂಪತಿಯ ಓರ್ವ ಮಗಳು ಅಮೆರಿಕದಲ್ಲಿದ್ದಾರೆಂಬ ಮಾಹಿತಿ ಸಿಕ್ಕಿದೆ.