Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೊಪ್ಪಳ ಅಪಘಾತ: ಲಾರಿ-ಬೈಕ್ ಡಿಕ್ಕಿ, ಇಬ್ಬರು ಬೈಕ್ ಸವಾರರ ದುರ್ಮರಣ.

Spread the love

ಯಲಬುರ್ಗಾ : ತಾಲೂಕಿನ ಉಪ್ಪಲದಿನ್ನಿ ಗ್ರಾಮದ ಸಮೀಪದ ಎನ್‌ಎಚ್-50ರಲ್ಲಿ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಕುಷ್ಟಗಿಯಿಂದ ಹೊಸಪೇಟೆ ಕಡೆ ತೆರಳುತ್ತಿದ್ದ ವೇಳೆ, ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಲಾರಿ ಚಾಲಕನು ಬಲಭಾಗದಿಂದ ಎಡಭಾಗಕ್ಕೆ ತಿರುಗಿಸುವಾಗ ಬೈಕ್‌ಗೆ ಢಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಢಿಕ್ಕಿಯ ಪರಿಣಾಮ ಇಬ್ಬರೂ ಲಾರಿ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ .
ಶ್ರೀನಿವಾಸ್ (26) ಹಾಗೂ ಸಿದ್ದನಗೌಡ (25) ಮೃತರು. ಇವರು ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love
Share:

administrator

Leave a Reply

Your email address will not be published. Required fields are marked *