Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪ್ರಿಯಕರನ ಸಾಲ ತೀರಿಸಲು ಮಾಲೀಕರ ಮನೆಯಲ್ಲೇ ಕನ್ನ ಹಾಕಿದ ಕೆಲಸದಾಕೆ!

Spread the love

ಬೆಂಗಳೂರು: ಪ್ರಿಯಕರನ ಸಾಲ ತೀರಿಸೋಕೆ ಆಂಟಿ ಕಳ್ಳಿಯಾಗಿ 3.4 ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರಿನ (Bengaluru) ಹೆಣ್ಣೂರು (Hennuru) ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಸಾಪಾಳ್ಯದಲ್ಲಿ ನಡೆದಿದೆ.

ಬಂಧಿತ ಆರೋಪಿತೆಯನ್ನು ಪ್ರಮೀಳಾ ಹಾಗೂ ಆಕೆಯ ಪ್ರಿಯಕರನನ್ನು ಸುಧಾಕರ್ ಎಂದು ಗುರುತಿಸಲಾಗಿದೆ. ಚಿನ್ನಾಭರಣವನ್ನು ಕದ್ದು, ಅದನ್ನು ಮಾರಾಟ ಮಾಡಿದ ಹಣವನ್ನು ಪ್ರಿಯಕರನಿಗೆ ನೀಡಿದ್ದಳು ಎಂದು ತಿಳಿದುಬಂದಿದೆ.

ಆರೋಪಿತೆ ಪ್ರಮೀಳಾಗೆ ಮದುವೆಯಾಗಿ ಗಂಡ ಬಿಟ್ಟಿದ್ದು, ಪ್ರಿಯಕರನಿಗೆ ಮದುವೆಯಾಗಿ ಎರಡು ಮಕ್ಕಳಿದ್ದವು. ಬೊಮ್ಮನಹಳ್ಳಿಯ ಗಾರ್ಮೆಂಟ್ಸ್ನಲ್ಲಿ ಇಬ್ಬರು ಕೆಲಸ ಮಾಡುವಾಗ ಪರಿಚಯವಾಗಿ ಪ್ರೀತಿಯಾಗಿತ್ತು. ಬಳಿಕ ಅಲ್ಲಿ ಕೆಲಸ ಬಿಟ್ಟು ಖಾಸಗಿ ಅಪಾರ್ಟ್ಮೆಂಟ್‌ನಲ್ಲಿ ಮನೆಕೆಲಸ ಮಾಡುತ್ತಿದ್ದಳು. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಸುಧಾರಕ್ ಪ್ರಮೀಳಾಗೆ ಸಾಲ ತೀರಿಸೋಕೆ 20 ಸಾವಿರ ರೂ. ಕೇಳಿದ್ದ. ಆಗ ಕೆಲಸ ಮಾಡುತ್ತಿದ್ದ ಮಾಲೀಕರ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿ, ಮಾರಾಟ ಮಾಡಿ ಪ್ರಿಯಕರನಿಗೆ ಹಣ ಕೊಟ್ಟಿದ್ದಳು.

ಒಂದು ತಿಂಗಳ ಬಳಿಕ ಮನೆ ಮಾಲೀಕರಿಗೆ ಚಿನ್ನ ಕಳ್ಳತನದ ವಿಷಯ ಗೊತ್ತಾಗಿತ್ತು. ನಂತರ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ದೂರು ದಾಖಲಿಸಿ ಪೊಲೀಸರು ಮನೆಕೆಲಸದಾಕೆ ವಿಚಾರಣೆ ನಡೆಸಿದ್ದರು. ಈ ವೇಳೆ ತನಗೇನು ಗೊತ್ತೇ ಇಲ್ಲ ಎಂಬಂತೆ ಪ್ರಮೀಳಾ ನಾಟಕವಾಡಿದ್ದಳು. ನಂತರ ಪೊಲೀಸ್ ಭಾಷೆಯಲ್ಲಿ ವಿಚಾರಣೆ ಮಾಡಿದಾಗ ಅಸಲಿ ಸತ್ಯ ಬಾಯಿಬಿಟ್ಟಿದ್ದಳು.

ವಿಚಾರಣೆ ವೇಳೆ ಕದ್ದದ್ದನ್ನು ಬೊಮ್ಮನಹಳ್ಳಿಯ ಚಿನ್ನದ ಅಂಗಡಿಗಳಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ಪೊಲೀಸರು ಆರೋಪಿತೆಯಿಂದ ಒಟ್ಟು 3.4 ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಪರಾರಿಯಾಗಿರುವ ಪ್ರಮೀಳಾ ಪ್ರಿಯಕರ ಸುಧಾಕರ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *