ನಟ ರಣವೀರ್ ಸಿಂಗ್ಗೆ ಬಿಷ್ಣೋಯ್ ಗ್ಯಾಂಗ್ ಬೆದರಿಕೆ: 10 ಕೋಟಿ ರೂ.ಗೆ ಬೇಡಿಕೆ!

ಹೊಸದಿಲ್ಲಿ: ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್ 10 ಕೋಟಿ ರೂ.ನೀಡುವಂತೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.
ಅಮೆರಿಕದಲ್ಲಿ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಧ್ವನಿ ಸಂದೇಶದ ಮೂಲಕ ಬೆದರಿಕೆ ಸಂದೇಶವನ್ನು ಕಳಹಿಸಲಾಗಿದೆ ಎಂದು ವರದಿಯು ತಿಳಿಸಿದೆ.
ಮುಂಬೈ ಪೊಲೀಸರು ಈ ಬಗ್ಗೆ ತನಿಖೆಯನ್ನು ಆರಂಭಿಸಿದ್ದು, ಮೊಬೈಲ್ ಸಂಖ್ಯೆಯ ಮೂಲವನ್ನು ಪತ್ತೆಹಚ್ಚಲು ಮತ್ತು ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಪತ್ತೆ ಹಚ್ಚಲು ಅಮೆರಿಕದ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಂಪರ್ಕ ಸಾಧಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಲಾರೆನ್ಸ್ ಬಿಷ್ಟೋಯಿ ಈ ಹಿಂದೆ ಸುಲಿಗೆ ಮತ್ತು ಬೆದರಿಕೆ ಪ್ರಕರಣಗಳಲ್ಲಿ ಭಾಗಿಯಾಗಿತ್ತು.
