Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನೇಪಾಳ: ತ್ರಿಶೂಲಿ ನದಿಗೆ ಉರುಳಿದ ಬಸ್; 18 ಮಂದಿ ಸಾ*ವು, 27 ಜನರಿಗೆ ಗಾಯ

Spread the love

ಕಠ್ಮಂಡು: ಪ್ರಯಾಣಿಕರಿದ್ದ ಬಸ್ ನದಿಗೆ ಉರುಳಿ ಬಿದ್ದ ಪರಿಣಾಮ 18 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿರುವ ಘಟನೆ ನೇಪಾಳದ (Nepal) ಧಾಡಿಂಗ್ (Dhading) ಜಿಲ್ಲೆಯಲ್ಲಿ ನಡೆದಿದೆ.

ಕಠ್ಮಂಡುವಿನಿಂದ ಪಶ್ಚಿಮಕ್ಕೆ ಸುಮಾರು 90 ಕಿ.ಮೀ ದೂರದಲ್ಲಿರುವ ಗಜೂರಿ ಬಳಿ ಸೋಮವಾರ ನಸುಕಿನ ಜಾವ 1:30ರ ಸುಮಾರಿಗೆ ದುರಂತ ಸಂಭವಿಸಿದೆ. ಬಸ್ ಪೋಖರದಿಂದ ಕಠ್ಮಂಡು ಕಡೆಗೆ ಬರುತ್ತಿದ್ದ ವೇಳೆ ತ್ರಿಶೂಲಿ ನದಿಗೆ (Trishuli River) ಉರುಳಿದೆ. ತಕ್ಷಣವೇ ನೇಪಾಳ ಸೇನೆ, ಸಶಸ್ತ್ರ ಪೊಲೀಸ್ ಪಡೆ ಹಾಗೂ ನೇಪಾಳ ಪೊಲೀಸರು ಕಾರ್ಯಾಚರಣೆಗಿಳಿದಿದ್ದಾರೆ

ಗಾಯಾಳುಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಪೈಕಿ ಒಬ್ಬರು ನ್ಯೂಜಿಲೆಂಡ್ ಪ್ರಜೆಯಾಗಿದ್ದರು. ಜಪಾನ್ ಹಾಗೂ ನೆದರ್‌ಲೆಂಡ್‌ನ ತಲಾ ಒಬ್ಬರು ಗಾಯಗೊಂಡಿದ್ದಾರೆ ಎಂದು ಸಶಸ್ತ್ರ ಪೊಲೀಸ್ ಪಡೆಯ ವಕ್ತಾರ ಬಿಷ್ಣು ಪ್ರಸಾದ್ ಭಟ್ಟ ತಿಳಿಸಿದ್ದಾರೆ.

ಅಪಘಾತಕ್ಕೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಬಸ್ ಚಾಲಕನ ಅತಿವೇಗದ ಚಾಲನೆಯಿಂದ ಬಸ್ ನದಿಗೆ ಉರುಳಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *