Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೇಸಿಗೆಯ ಅಟ್ಟಹಾಸ: ಬೆಂಗಳೂರಿನಲ್ಲಿ ದಾಖಲೆ ಬಿಸಿಲು; ಅನಗತ್ಯವಾಗಿ ಹೊರಹೋಗದಂತೆ ಸೂಚನೆ!

Spread the love

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ನಿನ್ನೆಯಷ್ಟೇ ಮೋಡ ಕವಿದ ವಾತಾವರಣ ಕಾಣಿಸಿತ್ತು. ಆದರೆ ಇಂದು ಎಲ್ಲೆಡೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎನ್ನಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನೀವೇನು ಮಾಡಬೇಕು?
ನಗರದಲ್ಲಿ ಈಗಾಗಲೇ ಮಧ್ಯಾಹ್ನ ವೇಳೆಯಲ್ಲಿ ಹೊರಗೆ ಸಂಚಾರ ಮಾಡುವುದು ಕಷ್ಟಕರವಾಗಿದ್ದು, ಜನರು ಏರ್ ಕೂಲರ್ ಮತ್ತು ಫ್ಯಾನ್‌ಗಳ ಸಹಾಯಕ್ಕೆ ಮೊರೆ ಹೋಗಿದ್ದಾರೆ. ಹವಾಮಾನ ಇಲಾಖೆ ತಜ್ಞರ ಪ್ರಕಾರ, ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.
ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.
ಎಲ್ಲೆಲ್ಲಿ ಒಣ ಹವೆ?
ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು,ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.


Spread the love
Share:

administrator

Leave a Reply

Your email address will not be published. Required fields are marked *