ನೈತಿಕ ಪೊಲೀಸ್‌ಗಿರಿ ಪ್ರಕರಣ; ಅಪ್ರಾಪ್ತರಿಗೆ ಕಿರುಕುಳ ನೀಡಿದ ತಂದೆ-ಮಗನ ಬಂಧನ

ಮಂಗಳೂರು: ನಗರದ ಬಾಬುಗುಡ್ಡ ಎಂಬಲ್ಲಿ ರೈಲ್ವೆ ಹಳಿ ಮೇಲೆ ಕುಳಿತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ-ವಿದ್ಯಾರ್ಥಿನಿಯ ವೀಡಿಯೋ ಮಾಡಿ, ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ತಂದೆ ಮತ್ತು ಮಗನನನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಬಂಧಿತ ಆರೋಪಿಗಳು.
ಸೋಮವಾರ ಸಂಜೆ ನಗರದ ಬಾಬುಗುಡ್ಡ ರೈಲ್ವೆ ಹಳಿಯಲ್ಲಿ ಕುಳಿತಿದ್ದ ಶಾಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಆರೋಪಿಗಳಾದ ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ತಡೆದು ವೀಡಿಯೊ ಮಾಡಿದ್ದಾರೆ. ಅಲ್ಲದೇ, ಈ ವೇಳೆ ವಿದ್ಯಾರ್ಥಿಗೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿಯ ತಂದೆ ಪೊಲೀಸ್ ದೂರು ನೀಡಿದ್ದರು.
ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
