Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಕ್ಕಳು ಸರಿಯಾಗಿ ಓದುತಿಲ್ಲ ಎಂದು ನೀರು ತುಂಬಿದ ಬಕೆಟ್ ಗೆ ಮುಳುಗಿಸಿ ಕೊಂದ ತಂದೆ

Spread the love

ಕಾಕಿನಾಡ : ಇನ್ನೂ ಎಲ್ ಕೆಜಿ ಮತ್ತು ಒಂದನೇ ತರಗತಿ ಒದುತ್ತಿರುವ ಮಕ್ಕಳು ಸರಿಯಾಗಿ ವಿಧ್ಯಾಭ್ಯಾಸ ಮಾಡುತ್ತಿಲ್ಲ ಎಂದು ಕೇಂದ್ರ ಸರಕಾರಿ ನೌಕರನಾಗಿರುವ ಅಪ್ಪ ಇಬ್ಬರೂ ಮಕ್ಕಳನ್ನು ಕೈಕಾಲುಗಳನ್ನು ಕಟ್ಟಿ, ತಲೆಗಳನ್ನು ನೀರು ತುಂಬಿದ ಬಕೆಟ್‌ಗಳಲ್ಲಿ ಮುಳುಗಿಸಿ ಕೊಂದಿರುವ ಘಟನೆ ಕಾಕಿನಾಡದಲ್ಲಿ ನಡೆದಿದೆ.
ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೇನಿ ಮೂಲದ ವನಪಲ್ಲಿ ಚಂದ್ರಕಿಶೋರ್ ಸ್ಥಳೀಯ ಒಎನ್‌ಜಿಸಿ ಕಚೇರಿಯಲ್ಲಿ ಸಹಾಯಕ ಲೆಕ್ಕಪತ್ರಗಾರರಾಗಿ ಕೆಲಸ ಮಾಡುತ್ತಿದ್ದ. ತನ್ನ ಇಬ್ಬರು ಮಕ್ಕಳ ಬಗ್ಗೆ ಅತಿಯಾದ ಕನಸು ಕಂಡಿದ್ದ ಈತ ಪ್ರತೀ ಬಾರಿ ಅವರು ಪರೀಕ್ಷೆಯಲ್ಲಿ ಪಡೆಯುತ್ತಿದ್ದ ಅಂಕವನ್ನು ಕಂಡು ಅಸಮಾಧಾನಗೊಂಡಿದ್ದ. ಈ ಬಗ್ಗೆ ಹಲವು ಬಾರಿ ಮನೆಯಲ್ಲಿ ಗಲಾಟೆ ನಡೆದಿದೆ. ಸ್ಪರ್ಧಾತ್ಮಕ ಜಗತ್ತಿನ ಒತ್ತಡವನ್ನು ತನ್ನ ಮಕ್ಕಳು ನಿಭಾಯಿಸಲು ಸಾಧ್ಯವಾಗುವುದಿಲ್ಲ ಎಂದು ನಂಬಿದ್ದ ತಂದೆಯೊಬ್ಬರು, ಅವರನ್ನು ಕೊಂದು ನಂತರ ತಾವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಇತ್ತೀಚಿಗಷ್ಟೇ ಹೋಳಿ ಹಬ್ಬದ ಸಂದರ್ಭದಲ್ಲಿ, ಚಂದ್ರಕಿಶೋರ್ ತಮ್ಮ ಪತ್ನಿ ತನುಜಾ ಮತ್ತು ಇಬ್ಬರು ಪುತ್ರರಾದ ಜೋಶಿಲ್ ಮತ್ತು ನಿಖಿಲ್ ಅವರೊಂದಿಗೆ ತಮ್ಮ ಕಚೇರಿಗೆ ಹೋಗಿದ್ದರು. ಮಕ್ಕಳನ್ನು ಸಮವಸ್ತ್ರದ ಅಳತೆಗಳನ್ನು ತೆಗೆದುಕೊಳ್ಳಲು ಟೈಲರ್ ಬಳಿ ಕರೆದೊಯ್ಯುತ್ತಿರುವುದಾಗಿ ಪತ್ನಿಗೆ ತಿಳಿಸಿ ಕಚೇರಿಯಲ್ಲಿಯೇ ಇರಲು ತಿಳಿಸಿದ್ದಾನೆ. ಚಂದ್ರಕಿಶೋರ್ ಇಬ್ಬರು ಮಕ್ಕಳನ್ನು ನೇರ ಮನೆಗೆ ಕರೆದುಕೊಂಡು ಹೋಗಿದ್ದಾನೆ.
ಇಬ್ಬರು ಮಕ್ಕಳನ್ನು ಮನೆಗೆ ಕರೆದೊಯ್ದ ನಂತರ, ಚಂದ್ರಕಿಶೋರ್ ಅವರ ಕೈಕಾಲುಗಳನ್ನು ಕಟ್ಟಿ, ತಲೆಗಳನ್ನು ನೀರು ತುಂಬಿದ ಬಕೆಟ್‌ಗಳಲ್ಲಿ ಮುಳುಗಿಸಿ ಕೊಂದಿದ್ದಾನೆ. ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತಿ ಬಹಳ ಸಮಯವಾದರೂ ಹಿಂತಿರುಗದಿದ್ದಾಗ, ತನುಜಾ ತನ್ನ ಸಹೋದ್ಯೋಗಿಗಳೊಂದಿಗೆ ಮನೆಗೆ ಹೋಗಿದ್ದಾಳೆ. ಕಿಟಕಿಯಿಂದ ಮನೆಯೊಳಗೆ ನೋಡಿದಾಗ, ಪತಿ ಮತ್ತು ಮಕ್ಕಳು ಸತ್ತಿರುವುದು ಕಂಡು ಬಂದಿದೆ. ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದ್ದು, ಚಂದ್ರಕಿಶೋರ್ ಬರೆದಿರುವ ಡೆತ್​ ನೋಟ್​​ ಸ್ಥಳದಲ್ಲಿ ಪತ್ತೆಯಾಗಿದೆ.


Spread the love
Share:

administrator

Leave a Reply

Your email address will not be published. Required fields are marked *