Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿಕ್ಕಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಪತ್ನಿಯಿಂದಲೇ ಕೊ*ಲೆ ನಡೆದ ಶಂಕೆ

Spread the love

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಸಿಕ್ಕಿದ್ದು, ಸಾಕಷ್ಟು ಅನುಮಾನ ಹುಟ್ಟಿಹಾಕಿದೆ. ಪತ್ನಿಯ ಅಕ್ರಮ ಸಂಬಂಧದಿಂತ (Affair) ಬೇಸತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡನೋ ಅಥವಾ ಆತನ ಪತ್ನಿಯೇ ಅವನ ಕೊಲೆ ಮಾಡಿದ್ದಾಳೋ ಎಂಬೆಲ್ಲಾ ಅನುಮಾನಗಳು ಉದ್ಭವವಾಗಿದ್ದು, ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಹೆಂಡತಿಯ ಅಕ್ರಮ ಸಂಬಂಧದಿಂದ ಬೇಸತ್ತಿದ್ದ ಪತಿ

ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದಲ್ಲಿ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಪತ್ನಿಯ ಅಕ್ರಮ ಸಂಬಂಧದಿಂದ ಸುಸ್ತಾಗಿದ್ದ ಮುನಿರಾಜು ಸಾವಿಗೆ ಆತನ ಪತ್ನಿ ಸುನಿತಾಳೇ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಪದೇ ಪದೇ ಮನೆ ಬಿಟ್ಟು ಬೇರೊಬ್ಬನ ಜೊತೆ ಹೋಗುತ್ತಿದ್ದಾಳೆಂದು ಮುನಿರಾಜು ಬೇಸರಗೊಂಡಿದ್ದ. ಇದೇ ಹಿನ್ನೆಲೆ ನಿನ್ನೆ (ಫೆ.27) ಮಧ್ಯರಾತ್ರಿ ಒಂದು ಗಂಟೆಯವರೆಗೂ ಸ್ಥಳೀಯರು ಹಾಗೂ ಪತ್ನಿಯ ಸಂಬಂಧಿಕರು ನ್ಯಾಯ ಪಂಚಾಯಿತಿ ನಡೆಸಿದ್ದರು ಎನ್ನಲಾಗಿದೆ.

ಅದಾದ ಬಳಿಕವೇ ಮುನಿರಾಜು ಅನುಮಾನಾಸ್ಫದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ. ಘಟನೆ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *