ಅಮೆರಿಕ–ಇಸ್ರೇಲ್ ದಾಳಿ ಬೆನ್ನಲ್ಲೇ ಮಾತುಕತೆಗೆ ಇರಾನ್ ಸ್ಪಷ್ಟ ನಿರಾಕರಣೆ

ಟೆಹ್ರಾನ್: ಎರಡು ಸುತ್ತಿನ ಅಮೆರಿಕ-ಇಸ್ರೇಲ್ ದಾಳಿಗಳ ನಂತರ ಅಮೆರಿಕದೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕದ ಕೆಲವು ಮಾಧ್ಯಮ ವರದಿಗಳು ಇರಾನ್ ಮಾತುಕತೆಗೆ ಸಿದ್ಧವಿದೆ ಎಂದು ಸೂಚಿಸಿದ್ದರೂ, ಅದನ್ನು ಇರಾನ್ ಸರ್ಕಾರ ತಳ್ಳಿಹಾಕಿದೆ ಎಂದು aljazeera.com ವರದಿ ಮಾಡಿದೆ.
ಇರಾನ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ಅಲಿ ಲಾರಿಜಾನಿ ಈ ಕುರಿತು ಪ್ರತಿಕ್ರಿಯಿಸಿ, ಇರಾನ್ ಅಮೆರಿಕದೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ. ದೇಶವು ಪ್ರಸ್ತುತ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಹಂತದಲ್ಲಿದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಈ ಯುದ್ಧವನ್ನು ಇರಾನ್‌ನ ಸಶಸ್ತ್ರ ಪಡೆಗಳು ಆರಂಭಿಸಿಲ್ಲ ಎಂಬುದನ್ನೂ ಅವರು ಒತ್ತಿ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಇರಾನ್ ಸರ್ಕಾರ ಇದೇ ನಿಲುವು ಪ್ರತಿಧ್ವನಿಸುತ್ತಿದೆ. ರಾಷ್ಟ್ರದ ಭದ್ರತೆ ಮತ್ತು ಸ್ವಾಯತ್ತತೆಯನ್ನು ಕಾಪಾಡಿಕೊಳ್ಳುವುದೇ ಈಗಿನ ಪ್ರಮುಖ ಆದ್ಯತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇರಾನ್ ರಾಜತಾಂತ್ರಿಕ ಮಾತುಕತೆಗಳನ್ನು ಮುಂದುವರಿಸುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರರು, ದೇಶವು ಈಗಾಗಲೇ ಎರಡು ಬಾರಿ ರಾಜತಾಂತ್ರಿಕ ಪ್ರಯತ್ನಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ. 2025ರಲ್ಲಿ ಯುಎಸ್-ಇಸ್ರೇಲಿ ದಾಳಿಯಿಂದ ಮಾತುಕತೆಗಳಿಗೆ ಹಿನ್ನಡೆಯಾಯಿತು ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ಅಮೆರಿಕ ಮತ್ತು ಅಂತರರಾಷ್ಟ್ರೀಯ ಅಣುಶಕ್ತಿ ಸಂಸ್ಥೆ (IAEA) ಜೊತೆ ಎರಡು ಹೊಸ ಸುತ್ತಿನ ಮಾತುಕತೆಗಳನ್ನು ನಿರೀಕ್ಷಿಸಲಾಗಿತ್ತು. ಆದರೆ ಅದೇ ವೇಳೆಯಲ್ಲಿ ಮತ್ತೆ ದಾಳಿಗಳು ನಡೆದಿವೆ ಎಂದು ವಕ್ತಾರರು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ, ಪ್ರಸ್ತುತ ಬಿಕ್ಕಟ್ಟಿಗೆ ರಾಜತಾಂತ್ರಿಕ ಪರಿಹಾರ ಸಿಗುವ ಸಾಧ್ಯತೆ ಬಗ್ಗೆ ಇನ್ನೂ ಸ್ಪಷ್ಟತೆ