ಬಾಗ್ದಾದ್ ವಿಮಾನ ನಿಲ್ದಾಣದ ಬಳಿ ಹಾರಾಡುತ್ತಿದ್ದ ಶಂಕಿತ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆಗಳು

ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅನುಮಾನಾಸ್ಪದ ಡೋನ್ನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಇರಾಕಿ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ ಎಂದು Aljazeera ಉಲ್ಲೇಖಿಸಿದೆ.
ವಿಮಾನ ನಿಲ್ದಾಣದ ವಾಯುಪ್ರದೇಶದತ್ತ ಚಲಿಸುತ್ತಿದ್ದ ಡೋನ್ನ್ನು ರಕ್ಷಣಾ ವ್ಯವಸ್ಥೆಗಳು ಗುರಿಯಾಗಿಸಿ ನಾಶಪಡಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಡೋನ್ ಪತನಗೊಂಡ ಬಳಿಕ ಭದ್ರತಾ ಸಿಬ್ಬಂದಿ ಸ್ಥಳವನ್ನು ಸುತ್ತುವರಿದು ಪರಿಶೀಲನೆ ನಡೆಸಿದರು. ವಿಮಾನ ಸಂಚಾರಕ್ಕೆ ವ್ಯತ್ಯಯ ಉಂಟಾಗಿಲ್ಲ ಎಂದು ಮೂಲಗಳು ತಿಳಿಸಿವೆ.
