ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾ*ರ; ಅಪ್ರಾಪ್ತ ಆರೋಪಿ ವಿರುದ್ಧ ಪ್ರಕರಣ ದಾಖಲು

ಆಗ್ರಾ: ಬೆರ್ರಿ ಹಣ್ಣುಗಳನ್ನು ನೀಡುವ ಆಮಿಷವೊಡ್ಡಿ ಒಂಬತ್ತು ವರ್ಷದ ಬಾಲಕಿಯನ್ನು ಹೊಲಕ್ಕೆ ಬರುವಂತೆ ಪುಸಲಾಯಿಸಿದ 10 ಮತ್ತು 12 ವರ್ಷ ವಯಸ್ಸಿನ ಇಬ್ಬರು ಬಾಲಕರು ಹಾಡಹಗಲೇ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಹತ್ರಾಸ್ ಜಿಲ್ಲೆಯ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಮಾರ್ಚ್ 60ದು ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಹುಲ್ಲು ತರಲು ಕಾಡಿಗೆ ಹೋಗಿದ್ದ ಸಂದರ್ಭದಲ್ಲಿ ಈ ಇಬ್ಬರು ಬಾಲಕರು ಕೃತ್ಯ ಎಸಗಿದ್ದಾರೆ. ಘಟನೆ ಬಳಿಕ ಮನೆಗೆ ಮರಳಿದ ಬಲಕಿ ತಾಯಿಗೆ ವಿವರಿಸಿದ್ದಾಳೆ. ತಕ್ಷಣ ತಾಯಿ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಿದರು. ಬಾಲಕಿ ಹಾಗೂ ಆರೋಪಿಗಳಾದ ಬಾಲಕರು ಒಂದೇ ಗ್ರಾಮದವರು. 10 ವರ್ಷದ ಬಾಲಕ ಬಾಲಕಿಯ ಕೈಗಳನ್ನು ಬಲವಾಗಿ ಹಿಡಿದುಕೊಂಡರೆ, 12 ವರ್ಷದ ಬಾಲಕ ಅತ್ಯಾಚಾರ ಎಸಗಿದ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್ 70-1 (ಸಾಮೂಹಿಕ ಅತ್ಯಾಚಾರ) ಮತ್ತು ಫೋಕೋ ಕಾಯ್ದೆಯ ಸೆಕ್ಷನ್ 5/6 (ತೀವ್ರ ಲೈಂಗಿಕ ಹಲ್ಲೆ) ಅಡಿಯಲ್ಲಿ ಇಬ್ಬರು ಬಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ಹೇಳಿದ್ದಾರೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಶನಿವಾರ ಸಂಜೆ ಇಬ್ಬರು ಬಾಲಕರನ್ನು ವಶಕ್ಕೆ ಪಡೆದು, ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ಇಬ್ಬರನ್ನೂ ಬಾಲಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
