Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಧ್ಯಪ್ರಾಚ್ಯದಲ್ಲಿ ಸಿಲುಕಿದ 230 ಕನ್ನಡಿಗರು: ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ

Spread the love

ಬೆಂಗಳೂರು : ಇತ್ತೀಚೆಗೆ ಮಧ್ಯಪ್ರಾಚ್ಯದ ವಿವಿಧ ದೇಶಗಳಿಂದ ಸುಮಾರು 278 ಜನರು ಸುರಕ್ಷಿತವಾಗಿ ಕರ್ನಾಟಕ ರಾಜ್ಯಕ್ಕೆ ಮರಳಿದ್ದು ಸುಮಾರು 230 ಕನ್ನಡಿಗರು ಮಧ್ಯಪ್ರಾಚ್ಯದ ವಿವಿಧ ದೇಶಗಳಲ್ಲಿ ಸಿಲುಕಿದ್ದಾರೆ ಎಂದು ವಿಪತ್ತು ನಿರ್ವಹಣೆ, ಭೂಮಿ ಮತ್ತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌನ್ಸಿಲ್ ಮಾಹಿತಿ ನೀಡಿದ್ದಾರೆ.
ಸೋಮವಾರ ಸಂಬಂಧ ಪ್ರಕಟನೆ ಹೊರಡಿಸಿರುವ ಅವರು, ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ವಿಡಿಯೋ ಕಾನ್ಸರೆನ್ಸ್ ನಡೆಸಿ, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತ ಕರೆ ತರುವ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಹಾಗೆಯೇ ಆ ಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರ ಪಟ್ಟಿಯನ್ನು ಹಂಚಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸೌದಿ ಅರೇಬಿಯಾ ಸೇರಿ ಇತರ ವಿಮಾನ ನಿಲ್ದಾಣಗಳಲ್ಲಿ ವಿಮಾನ ಯಾನಗಳು ಭಾಗಶಃ ಪುನರಾರಂಭವಾಗುತ್ತಿವೆ. ಭಾರತೀಯ ಮತ್ತು ವಿದೇಶಿ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಅಲ್ಲಿರುವ ಭಾರತೀಯ ಪ್ರಜೆಗಳು ಹಿಂತಿರುಗಿ ಬರಲು ಅನುಕೂಲವಾಗುವಂತೆ ವಿಮಾನ ಹಾರಾಟದ ಆವರ್ತನವನ್ನು ಹೆಚ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆದರೆ ಕತಾರಲ್ಲಿ ವಿಮಾನ ಗಡಿಗಳನ್ನು ಸ್ಥಗಿತ ಮಾಡಿದ್ದಾರೆ. ಹೀಗಾಗಿ ಅಲ್ಲಿನ ಅನೇಕರು ಸೌದಿ ಅರೇಬಿಯಾದ ಮೂಲಕ ಭಾರತಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ. ಆದುದರಿಂದ ದೋಹಾದಲ್ಲಿರುವ ಭಾರತದ ರಾಯಭಾರ ಕಚೇರಿಯು ಅಲ್ಲಿನ ಕನ್ನಡಗರಿಗೆ ಅರೇಬಿಯಾದ ಮೂಲಕ ಭಾರತಕ್ಕೆ ಬರಲು ಅನುಕೂಲವಾಗುವಂತೆ ವೀಸಾವನ್ನು ಒದಗಿಸಬೇಕು ಎಂದು ರಾಜ್ಯ ಸರಕಾರವು ಕೇಂದ್ರ ಸರಕಾರಕ್ಕೆ ಮನವಿ ಮಾಡಿದೆ ಎಂದು ಮುನೀಶ್ ಮೌನ್ಸಿಲ್ ಹೇಳಿದ್ದಾರೆ.

ಇನ್ನು ರಾಜ್ಯಮಟ್ಟದಲ್ಲಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ಮತ್ತು ಎಲ್ಲ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ದಿನದ 24ಗಂಟೆಗಳ ಕಾಲವೂ ಕಾರ್ಯನಿರ್ವಹಿಸುತ್ತಿವೆ. ಹಾಗೆಯೇ ಪೀಡಿತ ವ್ಯಕ್ತಿಗಳು ಮತ್ತು ಅವರ ಕುಟುಂಬಗಳಿಗೆ ನೆರವು ನೀಡಲು ಕೇಂದ್ರಗಳ ಶ್ರಮಿಸುತ್ತಿವೆ. ಹೀಗಾಗಿ ಕರ್ನಾಟಕದ ಜನರು ಮಧ್ಯಪ್ರಾಚ್ಯದ ಸ್ಥಳೀಯ ಸರಕಾರಗಳು ಹೊರಡಿಸಿದ ಮಾರ್ಗಸೂಚಿಗಳು ಮತ್ತು ಸಲಹೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಭಾರತೀಯ ರಾಯಭಾರ ಕಚೇರಿಗಳ ಸಂಪರ್ಕದಲ್ಲಿ ಇರಬೇಕು ಎಂದು ಅವರು ಸಲಹೆ ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *