Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಒಡಿಶಾ ಶಾಸಕರಿಗೆ ಬೆಂಗಳೂರಿನಲ್ಲಿ ಆಶ್ರಯ: ಅಡ್ಡ ಮತದಾನ ತಡೆಯಲು ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್

Spread the love

ಬೆಂಗಳೂರು : ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಸಭಾ ಚುನಾವಣೆಗೆ ಮುನ್ನ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಒಡಿಶಾ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯದಂತೆ ತಡೆಯಲು ಕಾಂಗ್ರೆಸ್ ತನ್ನ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಂಡಿದೆ.
ಗುರುವಾರ ರಾತ್ರಿ ಒಡಿಶಾ ಶಾಸಕರು ಬೆಂಗಳೂರಿಗೆ ಆಗಮಿಸಿದ ಬಳಿಕ ಇದೀಗ ಅಸ್ಸಾಂ ರಾಜ್ಯದ 10 ಕಾಂಗ್ರೆಸ್ ಶಾಸಕರು ಕೂಡ ಬಿಡದಿ ಸಮೀಪದ ವಂಡರ್ಲಾ ರೆಸಾರ್ಟ್ ಗೆ ಆಗಮಿಸಿದ್ದಾರೆ. ಅಲ್ಲಿ ಅವರ ವಾಸ್ತವ್ಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಶಾಸಕರು ರೆಸಾರ್ಟ್‌ಗೆ ಆಗಮಿಸಿದ ವೇಳೆ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದು, ಭದ್ರತಾ ದೃಷ್ಟಿಯಿಂದ ರೆಸಾರ್ಟ್ ಸುತ್ತ ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿದೆ. ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಬಿಜೆಪಿ ನಡೆಸುವ ‘ಆಪರೇಷನ್ ಕಮಲ’ ಪ್ರಯತ್ನವನ್ನು ತಡೆಯುವ ಉದ್ದೇಶದಿಂದ ಶಾಸಕರನ್ನು ಒಟ್ಟಿಗೆ ಇರಿಸಲಾಗಿದೆ ಎಂದು ತಿಳಿದುಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *