ಭೂ ಒತ್ತುವರಿ ಪ್ರಕರಣ: ಕುಮಾರಸ್ವಾಮಿ ವಿರುದ್ಧ ಹೈಕೋರ್ಟ್ ಖಡಕ್ ಆದೇಶ

ರಾಮನಗರ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ನಿಂದ ಖಡಕ್ ಸೂಚನೆಯೂ ಕೂಡ ಬಂದಿತ್ತು. ಹೈಕೋರ್ಟ್ ಆದೇಶದ ಪ್ರಕಾರ ಇದೀಗ ಕಂದಾಯ ಇಲಾಖೆ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ.

ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಇಂದು ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ.
ಹೆಚ್.ಡಿ ಕುಮಾರಸ್ವಾಮಿಯವರ ತೋಟದ ಮನೆಯ ಸುತ್ತಮುತ್ತಲಿನ ಒತ್ತುವರಿ ಜಾಗದ ತೆರವಿಗೆ ಸಿದ್ಧತೆಮಾಡಿಕೊಳ್ಳಲಾಗಿದೆ. ಈಗಾಗಲೇ ಹೆಚ್ಡಿಕೆ ತೋಟದ ಮನೆಯ ಮುಂದೆ ಎರಡು ಜೆಸಿಬಿಗಳು ಬಂದು ನಿಂತಿದ್ದು, ತೆರವು ಕಾರ್ಯಾಚರಣೆ ತಯಾರಾಗಿವೆ.