ಮತ್ತೆ ಬಂದ ‘ಆಕಾಶ್’: ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳ ಸಂಭ್ರಮದ ಹಬ್ಬ!

ಪುನೀತ್ ರಾಜ್ಕುಮಾರ್ (Puneeth Rajkumar) ನಟಿಸಿ 2005 ರಲ್ಲಿ ಬಿಡುಗಡೆ ಆಗಿದ್ದ ‘ಆಕಾಶ್’ ಸಿನಿಮಾ ದಶಕಗಳ ಬಳಿಕ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ರಮ್ಯಾ ನಾಯಕಿಯಾಗಿ ನಟಿಸಿದ್ದ ಈ ಸಿನಿಮಾ 2005 ರಲ್ಲಿ ಬಿಡುಗಡೆ ಆಗಿದ್ದಾಗ ಭಾರಿ ದೊಡ್ಡ ಹಿಟ್ ಆಗಿತ್ತು. ಮಹೇಶ್ ಬಾಬು ನಿರ್ದೇಶಿಸಿದ್ದ ಈ ಸಿನಿಮಾಕ್ಕೆ ಪಾರ್ವತಮ್ಮ ರಾಜ್ಕುಮಾರ್ ಬಂಡವಾಳ ಹೂಡಿದ್ದರು. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾವನ್ನು ಅಪ್ಪು ಅಭಿಮಾನಿಗಳು ಸಂಭ್ರಮದಿಂದ ಸ್ವಾಗತ ಮಾಡಿದ್ದಾರೆ. ಚಿತ್ರಮಂದಿರದಲ್ಲಿಯಂತೂ ಅಪ್ಪು ಅಭಿಮಾನಿಗಳು ಹಬ್ಬವನ್ನೇ ಮಾಡಿದ್ದಾರೆ.
