ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ: ನಾಲ್ಕು ಬೋಗಿಗಳ ಕಿಟಕಿ ಗಾಜು ಪುಡಿಪುಡಿ!

ಮುಂಬೈ: ಮುಂಬೈ ಸಮೀಪದ ಠಾಕುರ್ಲಿ ಮತ್ತು ಕಲ್ಯಾಣ್ ರೈಲ್ವೆ ನಿಲ್ದಾಣಗಳ ನಡುವೆ ಚಲಿಸುತ್ತಿದ್ದ ಶಿರಡಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಈ ಕೃತ್ಯದಿಂದಾಗಿ ರೈಲಿನ ನಾಲ್ಕು ಬೋಗಿಗಳ (C1, C3, C4 ಮತ್ತು C7) ಕಿಟಕಿ ಗಾಜುಗಳು ಒಡೆದು ಜಖಂಗೊಂಡಿವೆ.

ಘಟನೆಗೆ ಸಂಬಂಧಿಸಿದಂತೆ ಆರ್ಪಿಎಫ್ (RPF) ಪೊಲೀಸರು 23 ವರ್ಷದ ಸ್ಕ್ರ್ಯಾಪ್ ವ್ಯಾಪಾರಿಯನ್ನು ಬಂಧಿಸಿದ್ದಾರೆ. ವಿಚಾರಣೆಯ ವೇಳೆ ಆರೋಪಿಯು ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಕಲ್ಲು ತೂರಾಟ ನಡೆಸಲು ಕಾರಣವೇನೆಂದು ತನಿಖೆ ನಡೆಸಲಾಗುತ್ತಿದೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸದ್ಯ ಆರೋಪಿಯ ವಿರುದ್ಧ ರೈಲ್ವೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.