Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಭೀಕರ ವೈಮಾನಿಕ ದಾಳಿ: ಆಸ್ಪತ್ರೆಯೇ ಧ್ವಂಸ, 400 ಮಂದಿ ಸಾ*ವು!

Spread the love

ಕಾಬೂಲ್: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಕಾಬೂಲ್‌ನಲ್ಲಿರುವ ಮಾದಕ ವ್ಯಸನಿಗಳ ಪುನರ್ವಸತಿ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 400 ಮಂದಿ ಸಾವನ್ನಪ್ಪಿದ್ದಾರೆ ಮತ್ತು 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರ ತಿಳಿಸಿದೆ.
ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಕಾಬೂಲ್‌ನಲ್ಲಿರುವ ‘ಓಮಿದ್’ (Omid) ಹೆಸರಿನ 2,000 ಹಾಸಿಗೆಗಳ ಸಾಮರ್ಥ್ಯದ ಮಾದಕ ವ್ಯಸನಿಗಳ ಚಿಕಿತ್ಸಾ ಆಸ್ಪತ್ರೆಯ ಮೇಲೆ ಈ ದಾಳಿ ನಡೆದಿದೆ. ಆಸ್ಪತ್ರೆಯ ಬಹುಪಾಲು ಕಟ್ಟಡಗಳು ಧ್ವಂಸವಾಗಿದ್ದು, ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಾಲಿಬಾನ್ ವಕ್ತಾರ ಹಮ್ದುಲ್ಲಾ ಫಿತ್ರತ್ ಆತಂಕ ವ್ಯಕ್ತಪಡಿಸಿದ್ದಾರೆ.ಆದರೆ ಪಾಕಿಸ್ತಾನ ಈ ಆರೋಪವನ್ನು ತಿರಸ್ಕರಿಸಿದೆ. ತಾವು ಕೇವಲ ‘ಭಯೋತ್ಪಾದಕರ ಅಡಗುತಾಣಗಳು ಮತ್ತು ಮಿಲಿಟರಿ ನೆಲೆಗಳನ್ನು’ ಗುರಿಯಾಗಿಸಿಕೊಂಡು ದಾಳಿ ಮಾಡಿದ್ದೇವೆ ಎಂದು ಹೇಳಿಕೊಂಡಿದೆ. ನಾಗರಿಕರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪಾಕಿಸ್ತಾನ ಸಮರ್ಥಿಸಿಕೊಂಡಿದೆ.ಕಳೆದ ಒಂದು ತಿಂಗಳಿನಿಂದ ಉಭಯ ದೇಶಗಳ ನಡುವೆ ಗಡಿ ಸಂಘರ್ಷ ತೀವ್ರಗೊಂಡಿದೆ. ಅಫ್ಘಾನಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂದು ಪಾಕಿಸ್ತಾನ ಆರೋಪಿಸುತ್ತಿದ್ದರೆ, ಅಫ್ಘಾನಿಸ್ತಾನವು ಪಾಕಿಸ್ತಾನದ ದಾಳಿಯನ್ನು ತನ್ನ ಸಾರ್ವಭೌಮತ್ವದ ಉಲ್ಲಂಘನೆ ಎಂದು ಕರೆದಿದೆ.


Spread the love
Share:

administrator

Leave a Reply

Your email address will not be published. Required fields are marked *