ಅಕ್ರಮ ವಿದ್ಯುತ್ ತಂತಿ ಬೇಲಿಗೆ ಮತ್ತೊಂದು ಬಲಿ; ಎರಡು ವರ್ಷದ ಗಂಡು ಹುಲಿ ಸಾ*ವು

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರಿನಲ್ಲಿ ಅಕ್ರಮ ವಿದ್ಯುತ್ ತಂತಿ ಬೇಲಿಗೆ ಸಿಲುಕಿದ ಹುಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಅಡವಿ ಮಠದ ಸಮೀಪದ ರವಿಚಂದ್ರ ಎಂಬುವರಿಗೆ ಸೇರಿದ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಷಿಸಿದ ಎರಡು ವರ್ಷ ವಯಸ್ಸಿನ ಹುಲಿ ಸಾವನ್ನಪ್ಪಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಅರಣ್ಯ ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಹುಲಿ ಸಾವನ್ನಪ್ಪಿದ ರವಿಚಂದ್ರ ರವರ ಜಮೀನನ್ನು ಪರಮೇಶ ಎಂಬುವರು ಗುತ್ತಿಗೆ ಪಡೆದು ಕೃಷಿ ಮಾಡುತ್ತಿದ್ದಾರೆ ಎಂದು ತಿಳದು ಬಂದಿದೆ.
ಈ ಭಾಗದಲ್ಲಿ ಹುಲಿಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಫರ್ ವಲಯದ ಅಧಿಕಾರಿಗಳು ಥರ್ಮಲ್ ಡೋಣ್ ಹಾರಿಸುವಾಗ ಘಟನೆ ಬೆಳಕಿಗೆ ಬಂದಿದೆ.
