Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ

Spread the love

ಬೆಂಗಳೂರು : ರಾಜ್ಯಾದ್ಯಂತ ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಈ ಬಾರಿ 2,871 ಕೇಂದ್ರಗಳಲ್ಲಿ ಒಟ್ಟು 9,02,889 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 8,12,855 ಹೊಸಬರು, 62,845 ಪುನರಾವರ್ತಿತ, 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ.
ಮಾ.18ರಿಂದ ಎ.2ರವರೆಗೆ ಪರೀಕ್ಷೆ ನಡೆಯುವ ದಿನಗಳಂದು ಮತ್ತು ಪರೀಕ್ಷೆ ನಡೆಯುವ ಸಮಯದಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟ‌ರ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಜೆರಾಕ್ಸ್, ಸೈಬರ್ / ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಪ್ರತಿಬಂಧಕಾಜ್ಞೆಯನ್ನು ವಿಧಿಸಲಾಗಿದೆ.
ಉಚಿತ ಸಾರಿಗೆ ವ್ಯವಸ್ಥೆ: ಎಸೆಸೆಲ್ಸಿ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ವಿತರಿಸಲಾಗಿದೆ. ಪರೀಕ್ಷೆಯನ್ನು ಬರೆಯುವ ವಿದ್ಯಾರ್ಥಿಗಳು ಬಿಎಂಟಿಬಸ್ ಹಾಗೂ ಕೆಎಸ್ಸಾರ್ಟಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಪ್ರವೇಶ ಪತ್ರಗಳನ್ನು ತೋರಿಸಿ ಪರೀಕ್ಷೆ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.


Spread the love
Share:

administrator

Leave a Reply

Your email address will not be published. Required fields are marked *