ನವದೆಹಲಿ: ವಸತಿ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ; ಮೂವರು ಮಕ್ಕಳು ಸೇರಿ ಆರು ಮಂದಿ ದಾರುಣ ಸಾ*ವು

ಹೊಸ ದಿಲ್ಲಿ: ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ನೈರುತ್ಯ ದಿಲ್ಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮನೆಯಲ್ಲಿದ್ದ ಎಲ್ಲರನ್ನೂ ರಕ್ಷಿಸಿ ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಎಲ್ಲ ಆರು ಮಂದಿ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಮೃತರನ್ನು ಪ್ರವೇಶ್ (35), ಕಮಲ್ (40), ಅಶು (32) ಎಂದು ಗುರುತಿಸಲಾಗಿದೆ. ಇದಲ್ಲದೆ ಮೂವರು ಅಪ್ರಾಪ್ತ ಮಕ್ಕಳು ಕೂಡ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದಿಲ್ಲಿ ಸಿಎಂ ರೇಖಾ ಗುಪ್ತಾ, ಈ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ.
