9 ವರ್ಷದ ಬಾಲಕನ ಮೇಲೆ ಲೈಂಗಿ*ಕ ದೌರ್ಜನ್ಯ; ಆರೋಪಿ ಆಶಿಷ್ ಪೂಜಾರಿ ಬಂಧನ

ಕೊಣಾಜೆ: 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂದಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಕೋಟೆಕಾರ್ ಮಡ್ಯಾರ್ ನಿವಾಸಿ ಆಶೀಶ್ ಪೂಜಾರಿ (33) ಎಂದು ಗುರುತಿಸಲಾಗಿದೆ. ಆರೋಪಿಯು ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
