ಕುದುರೆಮುಖದ 25ಕ್ಕೂ ಹೆಚ್ಚು ಕಡೆ ಕಾಡ್ಗಿಚ್ಚು: ಅಪರೂಪದ ಶೋಲಾ ಹುಲ್ಲುಗಾವಲು ಬೆಂಕಿಗೆ ಆಹುತಿ

ಚಿಕ್ಕಮಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಬೆಂಕಿ ಬಿಸಿಲ ಧಗೆಗೆ ಬೆಂಕಿ ಕಾಣಿಸಿಕೊಂಡಿದ್ದು, ಅಪರೂಪದ ಶೋಲಾ ಹುಲ್ಲುಗಾವಲು ಬಿಸಿಲ ಧಗೆಯ ಜೊತೆ ಬೆಂಕಿಗೆ ಹೊತ್ತಿ ಉರಿಯುತ್ತಿದೆ

ಕುದುರೆಮುಖ ರಾಷ್ಟ್ರೀಯ ಅರಣ್ಯ ತಪ್ಪಲಿನಲ್ಲಿ ಬರುವ ಈ ಶೋಲಾ ಹುಲ್ಲುಗಾವಲು ಹೊತ್ತು ಉರಿಯುತ್ತಿದ್ದು, ಇಲ್ಲಿನ 25ಕ್ಕೂ ಹೆಚ್ಚು ಕಡೆ ಕಿಡಿಗೇಡಿಗಳು ಬೆಂಕಿ ಹಚ್ಚಿರೋ ಶಂಕೆ ವ್ಯಕ್ತವಾಗಿದೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಟ, ವಾಲೀಕುಂಜಗಿರಿ ಸಾಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಈ ಬೆಂಕಿಯಿಂದಾಗಿ ನೆಲದಲ್ಲಿ ಗೂಡುಕಟ್ಟುವ ಪಕ್ಷಿ, ಪ್ರಾಣಿಗಳು, ಅಪರೂಪದ ಸಸ್ಯಸಂಪತ್ತು ಸುಟ್ಟು ಹೋಗಿರೋ ಸಾಧ್ಯತೆ ಇದೆ. ನೂರಾರು ಎಕರೆಗಟ್ಟಲೇ ಅರಣ್ಯ ಬೆಂಕಿಗೆ ಆಹುತಿಯಾಗಿದ್ದರೂ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅರಣ್ಯ ವೀಕ್ಷಕರ ನೇಮಕ ಮಾಡಿಕೊಂಡಿಲ್ಲ, ಕಿ ನಿಯಂತ್ರಣ ರೇಖೆ, ವೀಕ್ಷಣಾ ಗೋಪುರ ಯಾವುದನ್ನೂ ಮಾಡಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ವಾರದಿಂದ ಅರಣ್ಯ ಹೊತ್ತಿ ಉರಿಯುತ್ತಿದ್ದರೂ ಸ್ಥಳಕ್ಕೆ ಯಾರೂ ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಅರಣ್ಯ ಸಚಿವರು ಸೂಕ್ತ ಕ್ರಮಕೈಗೊಳ್ಳಬೇಕೆಂದು ಪರಿಸರವಾದಿಗಳ ಆಗ್ರಹಿಸಿದ್ದು, ಕಾರ್ಕಳ ಡಿಎಫ್ಓ ಶಿವರಾಮ್ ಬಾಬು ವಿರುದ್ಧ ಪರಿಸರವಾದಿಗಳು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುದುರೆಮುಖ ಅರಣ್ಯವೂ ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಈ ನಾಲ್ಕು ಜಿಲ್ಲೆಯೊಂದಿಗೆ ಗಡಿ ಹಂಚಿಕೊಂಡಿದೆ.