Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯದಲ್ಲಿ ವರುಣನ ಅಬ್ಬರ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

Spread the love

ಬೆಂಗಳೂರು: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು  ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​?

ಬೀದರ್, ಕಲಬುರ್ಗಿ, ಯಾದಗಿರಿ, ಬಿಜಾಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ.

ಎಲ್ಲೆಲ್ಲಿ ತುಂತುರು ಮಳೆ?

ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ 30 ರಿಂದ 40km/h ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಅದರಂತೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಆವರಿಸಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *