Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪಶ್ಚಿಮ ಬಂಗಾಳ ಚುನಾವಣೆ: ನಿಷ್ಪಕ್ಷಪಾತ ಮತದಾನಕ್ಕೆ ಚುನಾವಣಾ ಆಯೋಗದ ಮಾಸ್ಟರ್ ಪ್ಲಾನ್; 294 ಐಎಎಸ್ ಅಧಿಕಾರಿಗಳ ನಿಯೋಜನೆ

Spread the love

ಕೋಲ್ಕತಾ: ಅಭೂತಪೂರ್ವ ಕ್ರಮವೊಂದರಲ್ಲಿ ಭಾರತೀಯ ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ 294 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ 294 ಚುನಾವಣಾ ವೀಕ್ಷಕರನ್ನು ನಿಯೋಜಿಸಿದೆ. ಇದು ಈ ವರ್ಷ ಚುನಾವಣೆ ನಡೆಯಲಿರುವ ಯಾವುದೇ ರಾಜ್ಯದಲ್ಲಿ ನಿಯೋಜಿಸಲಾಗಿರುವ ಚುನಾವಣಾ ವೀಕ್ಷಕರ ಅತ್ಯಧಿಕ ಸಂಖ್ಯೆಯಾಗಿದೆ.
ಪಶ್ಚಿಮ ಬಂಗಾಳದಲ್ಲಿ ನಿಯೋಜಿಸಲ್ಪಟ್ಟಿರುವ ಎಲ್ಲಾ ಚುನಾವಣಾ ವೀಕ್ಷಕರು ಹೊರ ರಾಜ್ಯಗಳ ಐಎಎಸ್ ಅಧಿಕಾರಿಗಳಾಗಿದ್ದಾರೆ. ಅವರು ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ತೀವ್ರ ನಿಗಾ ಇಡಲಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣೆಯು ಎಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಲಿತಾಂಶವು ಮೇ 4ರಂದು ಹೊರಬೀಳಲಿದೆ.
ರಾಜ್ಯಾದ್ಯಂತ 80,600 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.
“ಸಾಮಾನ್ಯವಾಗಿ ಚುನಾವಣಾ ವೀಕ್ಷಕರೊಬ್ಬರು ಒಂದಕ್ಕಿಂತ ಹೆಚ್ಚು ಸಂಖ್ಯೆಯ ವಿಧಾನಸಭಾ ಕ್ಷೇತ್ರಗಳ ಮೇಲೆ ನಿಗಾ ಇಡುತ್ತಾರೆ. ಆದರೆ, ಈ ಬಾರಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆ‌ರ್)ಯ ಹಿನ್ನೆಲೆಯಲ್ಲಿ ಇದು ಭಿನ್ನವಾಗಿದೆ. ಎಸ್‌ಐಆರ್ ಬಳಿಕ, ರಾಜ್ಯ ಮತದಾರರ ಪಟ್ಟಿಯಿಂದ ಸುಮಾರು 64 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ” ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯ ಅಧಿಕಾರಿಯೊಬ್ಬರು ಹೇಳಿದರು.


Spread the love
Share:

administrator

Leave a Reply

Your email address will not be published. Required fields are marked *