Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜಲಸಮಾಧಿಯಾದ ಬಸ್: ಪದ್ಮಾ ನದಿಯಲ್ಲಿ 23 ಪ್ರಯಾಣಿಕರ ದಾರುಣ ಅಂತ್ಯ!

Spread the love

ಢಾಕಾ: ಬಾಂಗ್ಲಾದೇಶದಲ್ಲಿ ಸಾರಿಗೆ ದೋಣಿಯ ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ಬಸ್ ಆಕಸ್ಮಿಕವಾಗಿ ನದಿಗೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ (ಬುಧವಾರ) ಬಾಂಗ್ಲಾದೇಶದ (Bangladesh) ನೈಋತ್ಯ ಜಿಲ್ಲೆಯ ರಾಜ್ಬರಿಯಲ್ಲಿ ದೌಲಾಡಿಯಾ ಟರ್ಮಿನಲ್‌ನಲ್ಲಿ ಈ ಅಪಘಾತ (Bus Accident) ಸಂಭವಿಸಿದೆ. ಬಸ್ ಆಯತಪ್ಪಿ ಪದ್ಮಾ ನದಿಗೆ ಉರುಳಿದೆ.ಬುಧವಾರ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ರಾಜ್ಬರಿಯಿಂದ ಢಾಕಾದಿಂದ 128 ಕಿಲೋಮೀಟರ್ ದೂರದಲ್ಲಿರುವ ಢಾಕಾಗೆ ಪ್ರಯಾಣಿಸುತ್ತಿತ್ತು. ಬಸ್ ಸಾರಿಗೆ ದೋಣಿಯ ಮೇಲೆ ಹತ್ತುವಾಗ ಈ ಅಪಘಾತ ಸಂಭವಿಸಿದೆ. ಇದರಿಂದ ಬಸ್​​ನಲ್ಲಿದ್ದ ಪ್ರಯಾಣಿಕರು ನೀರಿಗೆ ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ಸೇವೆ ಮತ್ತು ಡೈವರ್‌ಗಳ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸಿವೆ.ಬಸ್​​ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚಿನ 50 ಜನರನ್ನು ತುಂಬಿಸಿಕೊಂಡಿತ್ತು. ವಿಪರೀತ ಭಾರವಾಗಿ ಬಸ್​ ಆಯತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ರಕ್ಷಣಾ ಹಡಗು ಹಮ್ಜಾ ಈ ಘಟನೆ ನಡೆದ 6 ಗಂಟೆಗಳ ನಂತರ ನದಿಯಿಂದ ಬಸ್ ಅನ್ನು ಹೊರತೆಗೆದಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಹಡಗಿನ ಕ್ರೇನ್ ಬಳಸಿ ಇಡೀ ಬಸ್ ಅನ್ನು ಮೇಲಕ್ಕೆತ್ತಲಾಯಿತು.ಈ ಘಟನೆಯ ಬಗ್ಗೆ ಬಾಂಗ್ಲಾದೇಶದ ಪ್ರಧಾನಿ ತಾರಿಕ್ ರೆಹಮಾನ್ ತನಿಖೆಗೆ ಆದೇಶಿಸಿದ್ದಾರೆ. ನದಿಗೆ ಬಿದ್ದ ಸುಮಾರು 11 ಪ್ರಯಾಣಿಕರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಹೆಚ್ಚಿನವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳು ಮತ್ತು ಅಧಿಕಾರಿಗಳ ಪ್ರಕಾರ, ಆ ಬಸ್​​ನಲ್ಲಿದ್ದ ಅನೇಕ ಪ್ರಯಾಣಿಕರು ಒಂದೇ ಕುಟುಂಬದ ಸದಸ್ಯರಾಗಿದ್ದರು.


Spread the love
Share:

administrator

Leave a Reply

Your email address will not be published. Required fields are marked *