Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿಕ್ಕಬಳ್ಳಾಪುರ: ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ; ನವವಿವಾಹಿತೆ ಸೇರಿ ಇಬ್ಬರ ದಾರುಣ ಸಾ*ವು; ಪತಿಯ ಸ್ಥಿತಿ ಗಂಭೀರ

Spread the love

ಚಿಕ್ಕಬಳ್ಳಾಪುರ: ಕಂಟೇನರ್​ಗೆ ಹಿಂದಿನಿಂದ ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ಇಬ್ಬರು ದುರ್ಮರಣ (death) ಹೊಂದಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಕ್ರಾಸ್ ಬಳಿ ನಡೆದಿದೆ. 5 ತಿಂಗಳ ಹಿಂದೆ ಮದುವೆಯಾಗಿದ್ದ ರಕ್ಷಿತಾ ರೆಡ್ಡಿ(28) ಮತ್ತು ಸಂಬಂಧಿ ಪವನ್ ರೆಡ್ಡಿ(30) ಸ್ಥಳದಲ್ಲೇ ಸಾವನ್ನಪ್ಪಿದ್ದು,  ರಕ್ಷಿತಾ ಪತಿ ರಾಜಶೇಖರರೆಡ್ಡಿ ಸ್ಥಿತಿ ಗಂಭೀರವಾಗಿದೆ. ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ರಕ್ಷಿತಾ ರೆಡ್ಡಿ ಮತ್ತು ರಾಜಶೇಖರ ರೆಡ್ಡಿ ಕಳೆದ 5 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ದಂಪತಿ ಬೆಂಗಳೂರಿನಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿದ್ದರು. ಸ್ವಗ್ರಾಮ ಆಂಧ್ರದ ಅನಂತಪುರದ ಅವಳಗಿಗೆ ತೆರಳುತ್ತಿದ್ದರು. ಈ ವೇಳೆ ಶೆಟ್ಟಿಗೆರೆ ಕ್ರಾಸ್ ಬಳಿ ಕಂಟೇನರ್​ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಚಿಕ್ಕಬಳ್ಳಾಪುರ ಬೈಪಾಸ್​ನಲ್ಲಿ ಸರಣಿ ರಸ್ತೆ ಅಪಘಾತ

ಬೆಂಗಳೂರು ಹೈದರಾಬಾದ್ ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈಪಾಸ್​ನಲ್ಲಿ 2 ಕಾರು, 2 ಲಾರಿ ಮತ್ತಯ 1 ಟ್ಯಾಂಕರ್ ಮಧ್ಯೆ ಸರಣಿ ರಸ್ತೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ರಸ್ತೆ ಬದಿ ಸಿಮೆಂಟ್ ಟ್ಯಾಂಕರ್ ಉರುಳಿಬಿದ್ದಿದೆ.

ಪ್ರತಿಯೊಂದು ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಾಗಳಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು. ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಖಾಸಗಿ ವೋಲ್ವೋ ಬಸ್​ಗೆ ಟಿಪ್ಪರ್​ ಡಿಕ್ಕಿ: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಕ್ರಾಸ್ ಬಳಿಯ ಹೈದರಾಬಾದ್​ನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ವೋಲ್ವೋ ಬಸ್​ಗೆ ಟಿಪ್ಪರ್​ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಸ್ತೆ ಡಿವೈಡರ್ ದಾಟಿ ಎದುರು ಬರುತ್ತಿದ್ದ ಬಸ್​ಗೆ ಟಿಪ್ಪರ್​ ಡಿಕ್ಕಿ ಹೊಡೆದಿದೆ. ಟಿಪ್ಪರ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *