Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಿಸ್ಕೆಟ್ ನೀಡಿ ಪ್ರಪೋಸ್ ಮಾಡಿದ್ದಕ್ಕೆ ಶುರುವಾದ ವಿವಾದ; ಸಲೂನ್ ಮಾಲೀಕ ಮತ್ತು ಪತ್ನಿಯ ಮೇಲೆ ಹ*ಲ್ಲೆ

Spread the love

ಬೆಂಗಳೂರು: ಬೆಂಗಳೂರಿನ (Bangalore) ಆವಲಹಳ್ಳಿಯ ಸ್ಕಿನ್ ಶೈನ್ ಫ್ಯಾಮಿಲಿ ಸಲೂನ್‌ನಲ್ಲಿ ಶುರುವಾದ ಸಣ್ಣ ವಿವಾದವೊಂದು ಇದೀಗ ಭೀಕರ ಮಾರಾಮಾರಿಯಲ್ಲಿ ಅಂತ್ಯವಾಗಿದೆ. ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್‌ಗೆ ಮಾಲೀಕ ಪ್ರಪೋಸ್ ಮಾಡಿದ್ದಾನೆ ಎಂಬ ಆರೋಪ ಹಾಗೂ ಅದನ್ನು ವಿರೋಧಿಸಿದ್ದಕ್ಕೆ ಕೆಲಸದಿಂದ ತೆಗೆದಿದ್ದೇ ಈ ಗಲಾಟೆಗೆ ಮೂಲ ಕಾರಣ ಎನ್ನಲಾಗಿದೆ.
ಆಲವಹಳ್ಳಿಯ ಸಲೂನ್ ಮಾಲೀಕ ಮೋಹನ್ ಕುಮಾರ್, ತನ್ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್ ಒಬ್ಬರಿಗೆ ಬಿಸ್ಕೆಟ್ ನೀಡಿ ಪ್ರಪೋಸ್ ಮಾಡಿದ್ದ ಎನ್ನಲಾಗಿದೆ. ಆದರೆ ಇದನ್ನು ಆಕೆ ನಿರಾಕರಿಸಿದ್ದರು. ಈ ವಿಚಾರವಾಗಿ ಮನಸ್ತಾಪ ಉಂಟಾಗಿ ಮೋಹನ್ ಕುಮಾರ್ ಆಕೆಯನ್ನು ಕೆಲಸದಿಂದ ತೆಗೆದುಹಾಕಿದ್ದರು. ಇದರಿಂದ ಬ್ಯೂಟಿಷಿಯನ್​​ನ ಪತಿ ಆಕ್ರೋಶಗೊಂಡಿದ್ದರು. ಪತ್ನಿಯನ್ನು ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ಆತ, ನಾಲ್ಕೈದು ಜನರ ಗುಂಪು ಕಟ್ಟಿಕೊಂಡು ಸಲೂನ್‌ಗೆ ನುಗ್ಗಿದ್ದಾರೆ.ಬ್ಯೂಟಿಷಿಯನ್‌ ಪತಿ ಮತ್ತು ಆತನ ಬೆಂಬಲಿಗರು ಸಲೂನ್ ಮಾಲೀಕ ಮೋಹನ್ ಕುಮಾರ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಗಲಾಟೆ ತಡೆಯಲು ಬಂದ ಮೋಹನ್ ಪತ್ನಿ ಶ್ರೀಜಾ ಅವರ ಕುತ್ತಿಗೆಗೆ ಕೈ ಹಾಕಿ ಹಲ್ಲೆ ನಡೆಸಲಾಗಿದ್ದು, ಬಂದವರೆಲ್ಲರೂ ಸೇರಿ ಸಲೂನ್‌ನಲ್ಲಿ ದಾಂಧಲೆ ನಡೆಸಿದ್ದಾರೆ. ಈ ಇಡೀ ದಾಳಿಯ ದೃಶ್ಯಗಳು ಸಲೂನ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.ಸದ್ಯ ಹಲ್ಲೆಗೊಳಗಾದ ಮೋಹನ್ ಕುಮಾರ್ ಅವರು ಬ್ಯೂಟಿಷಿಯನ್‌, ಆಕೆಯ ಪತಿ ಹಾಗೂ ಬೆಂಬಲಿಗರ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *