ಬೈಕ್‌ನಲ್ಲಿ ಬಂದು ವೋಟ್ ಮಾಡಿದ ಸಿಎಂ ರಂಗಸ್ವಾಮಿ: ಪುದುಚೇರಿ ಮುಖ್ಯಮಂತ್ರಿಯ ಸರಳತೆಗೆ ಫಿದಾ ಆದ ಜನತೆ!

ಪುದುಚೇರಿ: ಪುದುಚೇರಿ ಮುಖ್ಯಮಂತ್ರಿ ಹಾಗೂ ಎಐಎನ್ಆರ್‌ಸಿ (AINRC) ಮುಖ್ಯಸ್ಥ ಎನ್. ರಂಗಸ್ವಾಮಿ ವಿಧಾನಸಭೆ ಚುನಾವಣೆ ವೇಳೆ ಸರಳತೆ ಮೆರೆದಿದ್ದಾರೆ. ಮಂಗಲಂ, ತಟ್ಟಂಚವಾಡಿ ಕ್ಷೇತ್ರಗಳ ಅಭ್ಯರ್ಥಿಯಾಗಿರುವ ಅವರು, ಯಾವುದೇ ಹಮ್ಮುಬಿಮ್ಮಿಲ್ಲದೆ ಸಾಮಾನ್ಯರಂತೆ ಬೈಕ್ ಚಲಾಯಿಸಿಕೊಂಡು ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಮತದಾನದ ಬಳಿಕ ಅದೇ ಬೈಕ್‌ನಲ್ಲಿ ಮರಳಿದ ಸಿಎಂ ಅವರ ವಿಡಿಯೋ ಮತ್ತು ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ.
