Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಂಡಿಯಲ್ಲಿ ಇಬ್ಬರು ಯುವಕರ ಕೊಳೆತ ಶ*ವ ಪತ್ತೆ; ಕೊಲೆ ಶಂಕೆ

Spread the love


ಕುಕನೂರು : ಪಟ್ಟಣದಿಂದ ಭಾನಾಪುರಕ್ಕೆ ಹೋಗುವ ರಸ್ತೆಯ ಮಧ್ಯೆ ಮಸಬಹಂಚಿನಾಳ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 367ರ ಪಕ್ಕದ ಪೈಪ್‌ಲೈನ್ ಬಳಿಯ ತೆರೆದ ಗುಂಡಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಸೋಮವಾರ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಕೆಲವರು ಗುಂಡಿಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಪರಿಶೀಲನೆ ನಡೆಸಿದಾಗ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹಗಳು ಕಂಡುಬಂದಿವೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಕುಕನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತರನ್ನು ರುದ್ರೇಶ್ (23) ಹಾಗೂ ರವಿ (32) ಎಂದು ಗುರುತಿಸಲಾಗಿದ್ದು ಇಬ್ಬರೂ ಕುಕನೂರು ನಿವಾಸಿಗಳಾಗಿದ್ದಾರೆ.
ಮೃತದೇಹಗಳ ಮೇಲೆ ಗಾಯಗಳ ಗುರುತುಗಳು ಕಂಡುಬಂದಿದ್ದು ಕೊಲೆ ಮಾಡಿ ಬೇರೆಡೆದಿಂದ ತಂದು ಇಲ್ಲಿ ಎಸೆದಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪ್ರಕ್ರಿಯೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *