ನೊಯ್ಡಾದಲ್ಲಿ ಕಾರ್ಮಿಕರ ಆಕ್ರೋಶ: ವೇತನ ಹೆಚ್ಚಳಕ್ಕಾಗಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ವಾಹನಗಳಿಗೆ ಬೆಂಕಿ; ಕಲ್ಲು ತೂರಾಟ

ನೊಯ್ದಾ: ಕಂಪನಿಯೊಂದರಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸೋಮವಾರ ಕಾರ್ಮಿಕರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಕಲ್ಲು ತೂರಾಟ ನಡೆದಿದ್ದರಿಂದ ವಾಹನಗಳು ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವ ಘಟನೆ ನೋಯ್ದಾ ಎರಡನೆ ಹಂತದಲ್ಲಿ ನಡೆದಿದೆ.
ದೊಡ್ಡ ಸಂಖ್ಯೆಯ ಕಾರ್ಮಿಕರು ವಾಹನಗಳಿಗೆ ಬೆಂಕಿ ಹಚ್ಚುತ್ತಿರುವುದೂ ದೃಶ್ಯಾವಳಿಗಳಲ್ಲಿ ಕಂಡು ಬಂದಿದೆ.
ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
