Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಕ್ಕಿನ ಮರಿಗಳಿಗಾಗಿ ಅಕ್ಕಪಕ್ಕದ ಮನೆಯವರ ಕಿತ್ತಾಟ; ತಾಯಿಯಿಂದ ದೂರವಾಗಿ ಅನಾಥವಾದ ಮರಿಗಳು!

Spread the love

ಬೆಂಗಳೂರು: ಅಕ್ಕಪಕ್ಕದ ಮನೆಗಳ ನಡುವೆ ಬೆಕ್ಕುಗಳ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಶೇಷಾದ್ರಿಪುರದಲ್ಲಿ (Bengaluru) ನಡೆದಿದೆ. ಒಂದು ಮನೆಯ ಹೆಣ್ಣು ಬೆಕ್ಕು ಹಾಗೂ ಪಕ್ಕದ ಮನೆಯ ಗಂಡು ಬೆಕ್ಕಿನ ನಡುವಿನ ಸಂಪರ್ಕದಿಂದ ನಾಲ್ಕು ಮರಿಗಳು ಜನಿಸಿದ್ದು, ಈ ವಿಚಾರವೇ ಎರಡು ಕುಟುಂಬಗಳ ನಡುವೆ ವಿವಾದಕ್ಕೆ ಕಾರಣವಾಗಿದೆ.
ಅತಿರೇಕಕ್ಕೆ ತಿರುಗಿದ ಗಲಾಟೆ
ತಮ್ಮ ಮನೆಯ ಹೆಣ್ಣು ಬೆಕ್ಕಿನ ಜೊತೆ ನಾಲ್ಕು ಮರಿಗಳೂ ಮನೆಗೆ ಸೇರಿರುವುದನ್ನು ಕಂಡ ಮಾಲೀಕರು ಪಕ್ಕದ ಮನೆಯವರೊಂದಿಗೆ ಜಗಳಕ್ಕಿಳಿದಿದ್ದಾರೆ. ಈ ಮರಿಗಳು ಗಂಡು ಬೆಕ್ಕಿನದ್ದೇ ಎಂದು ವಿವಾದಕ್ಕಿಳಿದ ಹೆಣ್ಣು ಬೆಕ್ಕಿನ ಮಾಲೀಕರು ಮರಿಗಳನ್ನು ಗಂಡು ಬೆಕ್ಕಿನ ಮನೆಯ ಮುಂದೆ ಬಿಸಾಡಿ ಜಗಳ ನಡೆಸಿದ್ದಾರೆ ಎನ್ನಲಾಗಿದೆ.ವಿವಾದದ ವೇಳೆ ಗಂಭೀರ ಆರೋಪಗಳೂ ಕೇಳಿಬಂದಿದ್ದು, ಹೆಣ್ಣು ಬೆಕ್ಕಿನ ಮನೆಯವರು ಆಕ್ರೋಶದಿಂದ ನಿಮ್ಮ ಮಕ್ಕಳಿಗೆ ಆಸಿಡ್ ಹಾಕುತ್ತೀನಿ ಎಂದು ಅತಿರೇಕದ ಮಾತನ್ನಾಡಿದ್ದಾರೆಂದು ಪಕ್ಕದ ಮನೆಯವರು ಆರೋಪಿಸಿದ್ದಾರೆ.ತಾಯಿಯಲ್ಲದೆ ಮರಿಗಳು ಅನಾಥ!
ಈ ಗಲಾಟೆಯ ನಡುವೆ ಮರಿಗಳು ತಾಯಿಯಿಂದ ದೂರವಾಗಿ ದಿಕ್ಕಾಪಾಲಾಗಿದ್ದು, ತಾಯಿ ಬೆಕ್ಕು ತನ್ನ ಮರಿಗಳನ್ನು ಹುಡುಕುತ್ತ ನರಳುತ್ತಿದೆ. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆ ಗಂಡು ಬೆಕ್ಕಿನ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಶೇಷಾದ್ರಿಪುರ ಪೊಲೀಸರು ಎರಡೂ ಪಕ್ಷಗಳನ್ನು ಸಮಾಧಾನಪಡಿಸಿ ಜಗಳವನ್ನು ಶಮನಗೊಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *